Thursday, June 4, 2026
Homeಕರಾವಳಿಉಡುಪಿಕೋಟೇಶ್ವರದ ಕೋಟಿಲಿಂಗೇಶ್ವರ ದೇವಸ್ಥಾನದ ಬ್ರಹ್ಮರಥೋತ್ಸವ

ಕೋಟೇಶ್ವರದ ಕೋಟಿಲಿಂಗೇಶ್ವರ ದೇವಸ್ಥಾನದ ಬ್ರಹ್ಮರಥೋತ್ಸವ

- Advertisement -
- Advertisement -

ಕರಾವಳಿಯ ಏಳು ಯಾತ್ರಾಸ್ಥಳಗಳಲ್ಲಿ ಒಂದಾದ ಕೋಟೇಶ್ವರದ ಕೋಟಿಲಿಂಗೇಶ್ವರ ದೇವಸ್ಥಾನದಲ್ಲಿ ಧ್ವಜ ಪ್ರತಿಷ್ಠಾಪನೆ ಮತ್ತು ಬ್ರಹ್ಮಕಲಶೋತ್ಸವದ ಅಂಗವಾಗಿ ಬ್ರಹ್ಮರಥೋತ್ಸವವನ್ನು ಫೆ.16 ಬುಧವಾರದಂದು ಆಚರಿಸಲಾಯಿತು.

ಬೆಳಗ್ಗೆಯಿಂದಲೇ ರಥೋತ್ಸವದ ವಿಧಿ ವಿಧಾನ ಆರಂಭವಾಯಿತು. ನಂತರ ದೇವಸ್ಥಾನದ ಅರ್ಚಕರು ರಥೋತ್ಸವಕ್ಕೆ ಚಾಲನೆ ನೀಡಿದರು.

ಶತರುದ್ರಾಭಿಷೇಕ ಮತ್ತು ಇತರ ಧಾರ್ಮಿಕ ವಿಧಿ ವಿಧಾನಗಳ ನಂತರ ಸಾವಿರಾರು ಭಕ್ತರು ಧಾರ್ಮಿಕ ಘೋಷಣೆಗಳ ಪಠಣಗಳೊಂದಿಗೆ ಹಬ್ಬವನ್ನು ಆಚರಿಸಲಾಯಿತು.

ಹಬ್ಬದ ನಿಮಿತ್ತ ಕುಂದಾಪುರ ಡಿವೈಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

- Advertisement -

Latest News

error: Content is protected !!