ಉಡುಪಿ: ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ನಡೆದ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮೃತನ ಕುಟುಂಬ ತನಿಖೆಗೆ ಆಗ್ರಹಿಸಿ ಕೇರಳ ಮುಖ್ಯಮಂತ್ರಿಗೆ ದೂರು ನೀಡಿದೆ.
ನ. 9 ರಂದು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ನಡೆದ ಲಾಕಪ್ ಡೆತ್ ಪ್ರಕರಣದಲ್ಲಿ ಕೇರಳ ಮೂಲದ ಬಿಜು ಮೋನ್ ಸಾವಿನಪಿದ್ದರು. ಅವರ ಮೈಮೇಲೆ ಕೆಲ ಗಾಯಗಳ ಗುರುತು, ಮೊಣಕಾಲಿನ ಕೆಳಗೆ ಕೆಲ ಗಾಯದ ಗುರುತು ಕಂಡುಬಂದಿತ್ತು ಈ ಆರೋಪಿ ಕುಸಿದು ಬಿದ್ದು ಸಾವನಪ್ಪಿದ್ದಾನೆ ಎಂದು ಪೊಲೀಸರು ಸಿಒಡಿ ತನಿಖೆ ವೇಳೆ ಮಾಹಿತಿ ನೀಡಿದ್ದರು. ಆದರೆ ತನಿಖೆಯ ಬಳಿಕ ಲಾಕಪ್ ಡೆತ್ ಪ್ರಕರಣ ಬೆಳಕಿಗೆ ಬಂತು. ಲಾಕಪ್ ಡೆತ್ ಪ್ರಕರಣವನ್ನು ಅಸಹಜ ಸಾವು ಎಂದು ಪೊಲೀಸರು ಬಿಂಬಿಸಲು ಪ್ರಯತ್ನ ಪಟ್ಟಿದ್ದಾರೆ ಎಂದು ಉಡುಪಿ ಜಿಲ್ಲಾ ಪೊಲೀಸರ ವಿರುದ್ಧ ಬಿಜು ಮೋನು ಕುಟುಂಬ ಗಂಭೀರ ಆರೋಪ ಮಾಡಿದೆ. ಇದೀಗ ಅವರ ಸಾವಿನ ಬಗ್ಗೆ ಸಂಶಯವಿರುವುದಾಗಿ ಆತನ ಕುಟುಂಬ ತನಿಖೆಗೆ ಆಗ್ರಹಿಸಿ ಕೇರಳ ಮುಖ್ಯಮಂತ್ರಿಗೆ ಪತ್ರ ಬರೆದಿದೆ.
ಅಷ್ಟೇಅಲ್ಲದೆ ಬೆಂಗಳೂರಿನ ಸಿಐಡಿ ಇನ್ಸ್‌ಪೆಕ್ಟರ್‌ಗೆ ಪತ್ರ ಬರೆದು ಸಮಗ್ರ ತನಿಖೆ ನಡೆಸಿ ನ್ಯಾಯ ಕೊಡಿಸುವಂತೆ ಮೃತ ಕುಟುಂಬ ಮನವಿ ಮಾಡಿದೆ ಎನ್ನಲಾಗಿದೆ.
ಮೃತ ಸಹೋದರನ ಬಗ್ಗೆ ಬಿನು ಯೋಹನ್ನಾನ್ ಪ್ರತಿಕ್ರಿಯಿಸಿ, ‘ಮೊಬೈಲ್ ಬೆಳಕಿನಲ್ಲಿ ನಮಗೆ ಮೃತದೇಹವನ್ನು ಪೊಲೀಸರು ತೋರಿಸಿದ್ದರು. ಮೃತದೇಹವನ್ನು ನೋಡಿದಾಗ ಮೊಣಕಾಲಿನ ಕೆಳಗೆ ಬಹಳಷ್ಟು ಗಾಯದ ಗುರುತುಗಳಿತ್ತು. ಜಿಲ್ಲಾ ಮ್ಯಾಜಿಸ್ಟ್ರೇಟ್ ಅನುಮತಿ ಮೇರೆಗೆ ಮೃತದೇಹ ಪರಿಶೀಲಿಸಲಾಗಿತ್ತು. ದೇಹದಲ್ಲಿ ಸಾಕಷ್ಟು ಗಾಯದ ಗುರುತುಗಳು ಕಂಡು ಬಂದಿದ್ದವು. ನನ್ನ ಸಹೋದರನನ್ನು ಪೊಲೀಸರು ಕಾನೂನು ಪ್ರಕಾರವಾಗಿ ವಶಕ್ಕೆ ಪಡೆದ ಬಗ್ಗೆ ಅನುಮಾನವಿದೆ. ಓರ್ವ ಮಹಿಳೆಯ ದೂರಿನ ಹಿನ್ನೆಲೆಯಲ್ಲಿ ಸಹೋದರನನ್ನು ಬಂಧಿಸಲಾಗಿದ್ದು, ದೂರಿನ ಕಾಫಿ ಬಗ್ಗೆ ಕೂಡ ನಮಗೆ ಮಾಹಿತಿಯಿಲ್ಲ. ಇನ್ನು ದೂರು ಕೊಟ್ಟ ಮಹಿಳೆ ಯಾರು? ಎನ್ನುವುದು ಕೂಡ ಗೊತ್ತಿಲ್ಲ. ಈ ಎಲ್ಲಾ ವಿಚಾರವನ್ನು ನಾವು ಕೇರಳ ಮುಖ್ಯಮಂತ್ರಿ ಗಮನಕ್ಕೆ ತಂದಿದ್ದೇವೆ. ಅಸಹಜ ಸಾವು ಎಂದು ಕೇರಳ ಮುಖ್ಯಮಂತ್ರಿಗೆ ದೂರು ನೀಡಿದ್ದೇವೆ ಎಂದಿದ್ದಾರೆ.