Wednesday, June 24, 2026
HomeUncategorizedಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಕರ್ತವ್ಯಕ್ಕೆ ಅಡ್ಡಿ: ಬ್ರಹ್ಮಾವರ ಪೊಲೀಸರಿಂದ ಬೆಳ್ತಂಗಡಿ...

ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಕರ್ತವ್ಯಕ್ಕೆ ಅಡ್ಡಿ: ಬ್ರಹ್ಮಾವರ ಪೊಲೀಸರಿಂದ ಬೆಳ್ತಂಗಡಿ ಠಾಣೆಯಲ್ಲಿ ಹಲವರ ವಿರುದ್ಧ ದೂರು ದಾಖಲು

- Advertisement -
- Advertisement -

ಬೆಳ್ತಂಗಡಿ : ಉಜಿರೆ ತಿಮರೋಡಿ ಮನೆಯಲ್ಲಿ ಮಹೇಶ್ ಶೆಟ್ಟಿ ಬಂಧನ ಮಾಡಲು ಬ್ರಹ್ಮವಾರ ಪೊಲೀಸರು ಹೋದಾಗ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಹಲವರ ವಿರುದ್ಧ ಪ್ರಕರಣ ದಾಖಲಾಗಿದೆ.

ಯೂಟ್ಯೂಬ್ ಮೂಲಕ ಬಿ.ಎಲ್.ಸಂತೋಷ್ ವಿರುದ್ಧ ಮಹೇಶ್ ಶೆಟ್ಟಿ ತಿಮರೋಡಿ ಅವಹೇಳನಕಾರಿ ಹೇಳಿಕೆ ನೀಡಿದ ವಿರುದ್ಧ ಉಡುಪಿ ಜಿಲ್ಲೆಯ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಆ.18 ರಂದು ರಾಜೀವ್ ಕುಲಾಲ್ ದಾಖಲಾದ ಪ್ರಕರಣದಲ್ಲಿ ಆ.21 ರಂದು ಠಾಣೆಗೆ ಹಾಜರಾಗಲು ನೋಟಿಸ್ ನೀಡಿದ್ರೂ ಮಹೇಶ್ ಶೆಟ್ಟಿ ತಿಮರೋಡಿ ಹಾಜರಾಗದ ಹಿನ್ನಲೆಯಲ್ಲಿ ಆ.21 ರಂದು ಬೆಳಗ್ಗೆ ಉಜಿರೆ ತಿಮರೋಡಿ ಮನೆಯಲ್ಲಿ ಬ್ರಹ್ಮಾವರ ಪೊಲೀಸರು ಬಂಧನ ಮಾಡಲು ಬಂದಾಗ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಆ.21 ರಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ಬ್ರಹ್ಮವಾರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಅಶೋಕ್ ಮಲಬಾಗಿಲು ಅವರು ನೀಡಿದ ದೂರಿನ ಮೇರೆಗೆ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣಣವರ್, ಜಯಂತ್.ಟಿ ಹಾಗೂ ಇತರ 10-15 ಮಂದಿ ಆರೋಪಿಗಳ ವಿರುದ್ಧ ಕರ್ತವ್ಯಕ್ಕೆ ಅಡ್ಡಿ ಪಡಿಸಿರುವ ಬಗ್ಗೆ 4/2025 ರಲ್ಲಿ ಕಲಂ 132,189(2),351(2),263(a),190,262-BNS -2023 ಅಡಿಯಲ್ಲಿ ಆ. 22 ರಂದು ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!