Friday, June 27, 2025
Homeಕರಾವಳಿಕರಾವಳಿಯಲ್ಲಿ ಬ್ರೈನ್‌ ಹೆಲ್ತ್‌ ಕ್ಲಿನಿಕ್‌ ಕಾರ್ಯಾರಂಭ

ಕರಾವಳಿಯಲ್ಲಿ ಬ್ರೈನ್‌ ಹೆಲ್ತ್‌ ಕ್ಲಿನಿಕ್‌ ಕಾರ್ಯಾರಂಭ

spot_img
- Advertisement -
- Advertisement -

ಮಂಗಳೂರು: ಮಂಗಳೂರಿನ ವೆನ್ಲಾಕ್‌ ಆಸ್ಪತ್ರೆ ಮತ್ತು ಉಡುಪಿಯ ಅಜ್ಜರಕಾಡಿನಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ನರಗಳ ಸಂಬಂಧಿತ ರೋಗಗಳಿಗೆ ಚಿಕಿತ್ಸೆ ಮತ್ತು ಆರೈಕೆ ಸೇವೆಯನ್ನು ಉತ್ತೇಜಿಸುವ ಸಲುವಾಗಿ ಬ್ರೈನ್‌ ಹೆಲ್ತ್‌ ಕ್ಲಿನಿಕ್‌ ಆರಂಭಿಸಲಾಗಿದೆ.

ಈಗಗಾಲೇ ಸಂಯೋಜಕರುದೊಂದಿಗೆ ರಾಜ್ಯ ಸರಕಾರದಿಂದ ಬೆಂಗಳೂರು, ಕೋಲಾರ, ಚಿಕ್ಕ ಬಳ್ಳಾಪುರದಲ್ಲಿ ಪ್ರಾಯೋಗಿಕವಾಗಿ ಬ್ರೈನ್‌ ಹೆಲ್ತ್‌ ಕ್ಲಿನಿಕ್‌ ಆರಂಭಗೊಂಡಿತ್ತು. ಪ್ರಸ್ತುತ ಬ್ರೈನ್‌ ಹೆಲ್ತ್‌ ಕ್ಲಿನಿಕ್‌ ಅನ್ನು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಆರಂಭಗೊಳಿಸಲಾಗಿದ್ದು, ಕ್ಲಿನಿಕ್‌ಗಳಲ್ಲಿ ಸದ್ಯ ತಲಾ ಒಂದು ಸಾವಿರಕ್ಕೂ ಅಧಿಕ ಮಂದಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ವೆನ್ಲಾಕ್‌ ಆಸ್ಪತ್ರೆಗೆ ಅಥವಾ ಉಡುಪಿಗೆ ಹತ್ತಿರದ ಸುಮಾರು ಎಂಟು ಜಿಲ್ಲೆಗಳಿಂದ ರೋಗಿಗಳು ಬರುತ್ತಾರೆ. ಪ್ರಮುಖವಾಗಿ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕಾರವಾರ, ಕಾಸರಗೋಡು, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಯ ರೋಗಿಗಳಿಗೆ ಬ್ರೈನ್‌ ಕ್ಲಿನಿಕ್‌ ಆಸರೆಯಾಗಿದೆ.

ವೆನ್ಲಾಕ್‌ ಆಸ್ಪತ್ರೆಯಲ್ಲಿ ನರರೋಗ ವಿಭಾಗ ಮತ್ತು ಬ್ರೈನ್‌ ಹೆಲ್ತ್‌ ಕ್ಲಿನಿಕ್‌ ವಿಲೀನಗೊಂಡಿದ್ದು, ಈ ತಂಡದಲ್ಲಿ ನರರೋಗ ತಜ್ಞರು, ವೈದ್ಯಾಧಿಕಾರಿಗಳು, ಜಿಲ್ಲಾ ಸಂಯೋಜಕರು, ಸ್ಟಾಫ್‌ ನರ್ಸ್‌, ಸ್ಪೀಚ್‌ ಆ್ಯಂಡ್‌ ಲ್ಯಾಂಗ್ವೇಜ್‌ ಪೆಥಾ ಲಜಿಸ್ಟ್‌, ಫಿಸಿಯೋಥೆರಪಿಸ್ಟ್‌ ಮತ್ತು ಕ್ಲಿನಿಕಲ್‌ ಸೈಕಾಲಜಿಸ್ಟ್‌ ಕಾರ್ಯನಿರ್ವಹಿಸಲಿದ್ದಾರೆ. ಇನ್ನು ಸದ್ಯಕ್ಕೆ ಫಿಸಿಯೋಥೆರಪಿಸ್ಟ್‌ ಹುದ್ದೆ ಮಾತ್ರ ಖಾಲಿ ಇದ್ದು, ಎರಡು ತಿಂಗಳೊಳಗೆ ನೇಮಕಾತಿ ಆಗಲಿದೆ. ಸಂಯೋಜಕರು ನೀಡಿರುವ ಮಾಹಿತಿಯಂತೆ ಉಡುಪಿಯಲ್ಲಿ ಗುರುವಾರ ಕೆಎಂಸಿಯ ನರರೋಗ ತಜ್ಞರು ತಪಾಸಣೆ ನಡೆಸುತ್ತಾರೆ ಎಂದು ತಿಳಿದು ಬಂದಿದೆ.

ಇನ್ನು ಬ್ರೈನ್‌ ಹೆಲ್ತ್‌ ಕ್ಲಿನಿಕ್‌ನಲ್ಲಿ ತಲೆನೋವು, ಪಾರ್ಶ್ವವಾಯು, ಮೂರ್ಛೇರೋಗ, ಮರೆವು ರೋಗ ಸಹಿತ ಇತರ ನರ ಸಂಬಂಧಿ ರೋಗಗಳಿಗೆ ಚಿಕಿತ್ಸೆ ನೀಡಲಾಗುತ್ತದೆ.

ಹೊರ ರೋಗಿ ಚಿಕಿತ್ಸೆ ಮಾದರಿಯಲ್ಲಿ ಈ ಕ್ಲಿನಿಕ್‌ ಕಾರ್ಯನಿರ್ವಹಿಸುತ್ತಿದ್ದು, ಹೆಚ್ಚಿನ ಚಿಕಿತ್ಸೆ ಬೇಕು ಎಂದಾದರೆ ಜಿಲ್ಲಾಸ್ಪತ್ರೆಗೆ ಕಳಿಸಲಾಗುತ್ತದೆ. ಒಂದು ವೇಳೆ ಅಲ್ಲಿ ಚಿಕಿತ್ಸೆ ಲಭ್ಯವಿಲ್ಲದಿದ್ದರೆ ನಿಮ್ಹಾನ್ಸ್‌ ಆಸ್ಪತ್ರೆಗೆ ಸೂಚಿಸಲಾಗುತ್ತದೆ. ಪ್ರಸ್ತುತ ಈ ಜಿಲ್ಲಾಸ್ಪತ್ರೆಯಿಂದಲೇ ಔಷಧವನ್ನು ಪೂರೈಸಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ನಿಮ್ಹಾನ್ಸ್‌ನಿಂದ ಪೂರೈಸಲು ಕ್ರಮ ಕೈಗೊಳ್ಳಲಾಗಿದೆ.

- Advertisement -
spot_img

Latest News

error: Content is protected !!