Friday, April 26, 2024
Homeಜ್ಯೋತಿಷ್ಯ31 ವರ್ಷದೊಳಗೆ ಕರ್ನಾಟಕ ಮೂರು ಭಾಗ ಆಗಿ, 3 ಮುಖ್ಯಮಂತ್ರಿ, 3 ರಾಜ್ಯಪಾಲರಾಗುತ್ತಾರೆ: ಬ್ರಹ್ಮಾಂಡ ಗುರೂಜಿ...

31 ವರ್ಷದೊಳಗೆ ಕರ್ನಾಟಕ ಮೂರು ಭಾಗ ಆಗಿ, 3 ಮುಖ್ಯಮಂತ್ರಿ, 3 ರಾಜ್ಯಪಾಲರಾಗುತ್ತಾರೆ: ಬ್ರಹ್ಮಾಂಡ ಗುರೂಜಿ ಸ್ಫೋಟಕ ಭವಿಷ್ಯ

spot_img
- Advertisement -
- Advertisement -

ಹಾಸನ: ಇನ್ನು 31 ವರ್ಷದೊಳಗೆ ಕರ್ನಾಟಕ ಮೂರು ಭಾಗ ಆಗಿ, 3 ಮುಖ್ಯಮಂತ್ರಿ, 3 ರಾಜ್ಯಪಾಲರಾಗುತ್ತಾರೆ ಎಂದು ಬ್ರಹ್ಮಾಂಡ ಗುರೂಜಿ ಸ್ಫೋಟಕ ಭವಿಷ್ಯ ನುಡಿದಿದ್ದಾರೆ.

 ಹಾಸನಾಂಬೆ ದೇವಿ ದರ್ಶನ ಪಡೆಯಲು ಬಂದಿದ್ದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ  ಅವರು, 31 ವರ್ಷದೊಳಗೆ ಕರ್ನಾಟಕ ಮೂರು ಭಾಗ ಆಗಿ, ಮೂರು ಮುಖ್ಯಮಂತ್ರಿ, ಮೂವರು ರಾಜ್ಯಪಾಲರಾಗುತ್ತಾರೆ. ಇದು ಶಿವನ ಆಣೆಗೂ ಸತ್ಯ ಎಂದು ಭವಿಷ್ಯ ನುಡಿದಿದ್ದಾರೆ.

ಹಾಸನಾಂಬೆ ದರ್ಶನ ಪಡೆದು ಮಾತನಾಡಿದ ಅವರು, ದೇಶದ ಬಗ್ಗೆ ಮಾತನಾಡಿದಾಗ ಹೆಚ್ಚಾಗಿ ಟ್ರೋಲ್ ಮಾಡುತ್ತಾರೆ. ಹೀಗಾಗಿ ಪಾರ್ಲಿಮೆಂಟ್ ಏನು ಕಟ್ಟಿದ್ದಾರೆ ಅದು ಭಾರೀ ಘೋರವಾಗಿರುತ್ತದೆ ಎನ್ನುವುದನ್ನು ವೀರ ಬ್ರಹ್ಮಸ್ವಾಮಿ ಚರಿತ್ರೆಯಲ್ಲಿ ಬರೆದಿದ್ದಾರೆ. ತ್ರಿಕೋನಾತ್ಮಿಕ ದೀಪಿಕ, ಯಾವುದೇ ಪಾರ್ಲಿಮೆಂಟ್ ಗುಂಡಾಗಿರಬೇಕು, ಇಲ್ಲ ಚೌಕವಾಗಿರಬೇಕು, ಇಲ್ಲ ಚಂದ್ರ ಪೂರ್ತಿಯಾಗಿ ಕುಜನಾಂಶವಾಗಿರಬೇಕು.

ತ್ರಿಕೋನ ಮಾಡಿದಾಗ ಉಗ್ರವಾಗಿರುತ್ತದೆ. ಇನ್ಮೇಲೆ ದೇಶದ ಮೇಲೆ, ಜನರ ಮೇಲೆ ಒತ್ತಾಯ, ಒತ್ತಡಗಳು ಜಾಸ್ತಿ ಆಗುತ್ತದೆ. ಮೊದಲು ಕದ್ದುಮುಚ್ಚಿ ಲಂಚ ತೆಗೆದುಕೊಳ್ಳುತ್ತಿದ್ದರು. ಈಗ ಎಲ್ಲಾ ಓಪನ್. ದಡಂದಶಗುಣಂ ಭಗವಂತ ಆ ಸಮಯಕ್ಕೆ ಬಂದೇ ಬರುತ್ತಾನೆ ಎಂದಿದ್ದಾರೆ.

- Advertisement -
spot_img

Latest News

error: Content is protected !!