Friday, June 5, 2026
Homeತಾಜಾ ಸುದ್ದಿಗುಜರಾತ್ ನ ಮೊರ್ಬಿಯಲ್ಲಿ ಕೇಬಲ್ ಸೇತುವೆ ಕುಸಿದು 40 ಜನ ಸಾವು; ಮೃತರ ಸಂಖ್ಯೆ ಏರಿಕೆಯಾಗುವ...

ಗುಜರಾತ್ ನ ಮೊರ್ಬಿಯಲ್ಲಿ ಕೇಬಲ್ ಸೇತುವೆ ಕುಸಿದು 40 ಜನ ಸಾವು; ಮೃತರ ಸಂಖ್ಯೆ ಏರಿಕೆಯಾಗುವ ಸಾಧ್ಯತೆ

- Advertisement -
- Advertisement -

ಗುಜರಾತ್ ನ ಮೊರ್ಬಿಯಲ್ಲಿ ಕೇಬಲ್ ಸೇತುವೆ ಕುಸಿದು 40 ಜನ ಸಾವನ್ನಪ್ಪಿದ್ದಾರೆ.  ಸೇತುವೆ ಕುಸಿದು ಸುಮಾರು 400 ಜನರು ನದಿಗೆ ಬಿದ್ದಿದ್ದಾರೆ. ಸುಮಾರು100 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದು ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಅಪಘಾತದ ಬಗ್ಗೆ ಗುಜರಾತ್ ಸಿಎಂ ಭೂಪೇಂದ್ರ ಪಟೇಲ್ ಅವರೊಂದಿಗೆ ಮಾತನಾಡಿದ ಪ್ರಧಾನಿ ಮೋದಿ, ಪರಿಹಾರ ಮತ್ತು ರಕ್ಷಣಾ ಕಾರ್ಯಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮೊರ್ಬಿ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನ ಮಂತ್ರಿಗಳ ಪರಿಹಾರ ನಿಧಿಯಿಂದ 2 ಲಕ್ಷ ರೂ.ಗಳನ್ನು ಮತ್ತು ಗಾಯಗೊಂಡವರಿಗೆ 50,000 ರೂ.ಗಳನ್ನ ನೀಡಲಾಗುವುದು ಎಂದು ಪ್ರಧಾನಿ ಹೇಳಿದ್ದಾರೆ.

ರಕ್ಷಣಾ ತಂಡವನ್ನು ತಕ್ಷಣವೇ ಸ್ಥಳಕ್ಕೆ ಕಳುಹಿಸುವಂತೆ ಪ್ರಧಾನಿ ಮೋದಿ ಸಿಎಂ ಭೂಪೇಂದ್ರ ಪಟೇಲ್ ಅವ್ರಿಗೆ ಸೂಚಿಸಿದ್ದಾರೆ. ಸ್ವತಃ ಪರಿಸ್ಥಿತಿಯನ್ನ ಸೂಕ್ಷ್ಮವಾಗಿ ಮೇಲ್ವಿಚಾರಣೆ ಮಾಡುವಂತೆ ಮತ್ತು ರಕ್ಷಣಾ ಕಾರ್ಯಾಚರಣೆಯ ಉಸ್ತುವಾರಿಯನ್ನು ವಹಿಸಿಕೊಳ್ಳುವಂತೆ ಅವರು ಸಿಎಂಗೆ ನಿರ್ದೇಶನ ನೀಡಿದರು. ಘಟನೆಯಿಂದ ಬಾಧಿತರಾದವರಿಗೆ ಸಾಧ್ಯವಿರುವ ಎಲ್ಲಾ ಸಹಾಯವನ್ನ ಒದಗಿಸುವಂತೆ ಸೂಚಿಸಿದ್ದಾರೆ. ಅಪಘಾತದ ಸಮಯದಲ್ಲಿ ಸುಮಾರು 500 ಜನರು ಸೇತುವೆಯ ಮೇಲೆ ಇದ್ದರು ಎನ್ನಲಾಗ್ತಿದೆ.

- Advertisement -

Latest News

error: Content is protected !!