Thursday, August 20, 2026
Homeಕರಾವಳಿಮಂಗಳೂರು ವಿಮಾನ ನಿಲ್ದಾಣಕ್ಕೆ ಹೋಗುವ ಮಾರ್ಗ ಮಧ್ಯೆ ಸೇತುವೆ ಕುಸಿತ

ಮಂಗಳೂರು ವಿಮಾನ ನಿಲ್ದಾಣಕ್ಕೆ ಹೋಗುವ ಮಾರ್ಗ ಮಧ್ಯೆ ಸೇತುವೆ ಕುಸಿತ

- Advertisement -
- Advertisement -

ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುವ ಮಾರ್ಗ ಮಧ್ಯೆ ಸೇತುವೆ ಕುಸಿದಿರುವ ಘಟನೆ ಇಂದು ನಡೆದಿದೆ. ಮಂಗಳೂರು ಹೊರವಲಯದ ಬಜ್ಪೆ-ಮರವೂರು ನಡುವಿನ ಸೇತುವೆ ಕುಸಿದಿದ್ದು, ನೀರಿನ ಹರಿವು ಹೆಚ್ಚಾದ ಹಿನ್ನೆಲೆ ಅವಘಡ ಸಂಭವಿಸಿದೆ ಎನ್ನಲಾಗಿದೆ.

ಹೊಸ ಸೇತುವೆ ಕಾಮಗಾರಿ ನಡೆಯುತ್ತಿದ್ದ ಕಾರಣ ಒಂದೇ ಭಾಗದಲ್ಲಿ ನೀರಿನ ಹರಿವು ಹೆಚ್ಚಾಗಿತ್ತು. ಹೀಗಾಗಿ ಒಂದು ಭಾಗದ ಪಿಲ್ಲರ್ ಕುಸಿದು ಸೇತುವೆಗೆ ಹಾನಿಯಾಗಿದೆ. ಸೇತುವೆ ಕುಸಿದಿರುವ ಕಾರಣ ಮಂಗಳೂರಿನಿಂದ ವಿಮಾನ ನಿಲ್ದಾಣಕ್ಕೆ ತೆರಳುವ ಮಾರ್ಗ ಸಂಪೂರ್ಣ ಸ್ಥಗಿತವಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ವಾಹನ ಸಂಚಾರ ಬಂದ್ ಮಾಡಿರುವ ಮಂಗಳೂರು ಪೊಲೀಸರು, ಉಡುಪಿಯಿಂದ ಬರುವವರು ಮೂಲ್ಕಿಯಲ್ಲಿ ತಿರುವು ಪಡೆದು ಕಿನ್ನಿಗೋಳಿ-ಕಟೀಲು ಮಾರ್ಗವಾಗಿ ವಿಮಾನ ನಿಲ್ದಾಣಕ್ಕೆ ತೆರಳುವಂತೆ ಸೂಚನೆ ನೀಡಿದ್ದಾರೆ.

ಮಂಗಳೂರು ನಗರದಿಂದ ವಿಮಾನ ನಿಲ್ದಾಣದತ್ತ ಬರುವವರು ನಂತೂರಿನಲ್ಲಿ ತಿರುವು ಪಡೆದು ಕುಲಶೇಖರ ಗುರುಪುರ ರಸ್ತೆಯಾಗಿ ತೆರಳಬೇಕಿದೆ. ಸದ್ಯ ಮಂಗಳೂರಿನ ಕಾವೂರಿನಿಂದ ವಿಮಾನ ನಿಲ್ದಾಣಕ್ಕೆ ತೆರಳುವ ರಸ್ತೆ ಸಂಪೂರ್ಣ ಬಂದ್ ಆಗಿದ್ದು, ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!