Thursday, June 25, 2026
Homeಕರಾವಳಿಮಂಗಳೂರುಮೂಡಬಿದಿರೆ: ಭಂಡಾರವನ್ನು ಪಲ್ಲಕ್ಕಿಯಲ್ಲಿ ಹೊತ್ತು ಮೆರವಣಿಗೆ ಸಾಗಿಸುತ್ತಿದ್ದಾಗ ಕಾಲು ಸಂಕ ಮುರಿತ:  8 ಮಂದಿಗೆ ಗಾಯ

ಮೂಡಬಿದಿರೆ: ಭಂಡಾರವನ್ನು ಪಲ್ಲಕ್ಕಿಯಲ್ಲಿ ಹೊತ್ತು ಮೆರವಣಿಗೆ ಸಾಗಿಸುತ್ತಿದ್ದಾಗ ಕಾಲು ಸಂಕ ಮುರಿತ:  8 ಮಂದಿಗೆ ಗಾಯ

- Advertisement -
- Advertisement -

ಮೂಡುಬಿದಿರೆ: ಭಂಡಾರವನ್ನು ಪಲ್ಲಕ್ಕಿಯಲ್ಲಿ ಹೊತ್ತು ಮೆರವಣಿಗೆ ಸಾಗಿಸುತ್ತಿದ್ದಾಗ ಕಾಲು ಸಂಕ ಮುರಿದು  8 ಮಂದಿಗೆ ಗಾಯಗಳಾಗಿರುವ ಘಟನೆ ಮೂಡಬಿದರೆಯಲ್ಲಿ ಬುಧವಾರ ನಡೆದಿದೆ. ತಾಕೋಡೆ ಬರ್ಕೆ ಧರ್ಮನೇಮಕ್ಕೆ ಬಾವದಗುತ್ತುವಿನಿಂದ ಭಂಡಾರವನ್ನು ಪಲ್ಲಕ್ಕಿಯಲ್ಲಿ ಹೊತ್ತು ಮೆರವಣಿಗೆ ಸಾಗಿಸುತ್ತಿದ್ದಾಗ ಇದ್ದಕ್ಕಿದ್ದಂತೆ ಕಾಲು ಸಂಕ ಮುರಿದು ಬಿದ್ದಿದೆ.  ಸುನಿಲ್ ಶೆಟ್ಟಿ ಮುಕಾಲ್ಟಿ ಮಾರೂರು, ಲೋಕೇಶ್ ಭಂಡಾರಿ ಸೇರಿದಂತೆ ಇತರರು ಗಾಯಗೊಂಡವರು.ಘಟನೆ ತಿಳಿದ ಕೂಡಲೇ ಸ್ಥಳೀಯರು ತಕ್ಷಣ ಧಾವಿಸಿ ಗಾಯಾಳುಗಳನ್ನು ರಕ್ಷಿಸಿ, ಮೂಡಬಿದಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!