- Advertisement -
- Advertisement -
ನವದೆಹಲಿ: ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ನವದೆಹಲಿಯಲ್ಲಿ ಬಿಜೆಪಿಯ ಹಿರಿಯ ನಾಯಕರನ್ನು ಭೇಟಿ ಮಾಡಿದ್ದಾರೆ.
ಮಾಜಿ ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್ ಮತ್ತು ಜನರಲ್ ವಿ.ಕೆ. ಸಿಂಗ್ ಅವರನ್ನು ಸೌಹಾರ್ದ ಭೇಟಿ ಮಾಡಿದ ಬ್ರಿಜೇಶ್ ಚೌಟ ಕೆಲವು ಹೊತ್ತು ಮಾತುಕತೆ ನಡೆಸಿದ್ದಾರೆ.
ಬಿಜೆಪಿ ಸಂಸದೀಯ ಪಕ್ಷದ ಸಭೆಯಲ್ಲಿ ಭಾಗವಹಿಸುವ ಸಲುವಾಗಿ ಜೂನ್ ಐದರಂದೇ ಸಂಸದ ಬ್ರಿಜೇಶ್ ಚೌಟ ನವದೆಹಲಿಗೆ ತೆರಳಿದ್ದಾರೆ.
ಇಂದು ರಾತ್ರಿ ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಸಂಸದ ಚೌಟ ಪಾಲ್ಗೊಳ್ಳಲಿದ್ದಾರೆ.
- Advertisement -