Friday, June 5, 2026
Homeಕರಾವಳಿಮಂಗಳೂರುಸುಳ್ಯ ತಾಲೂಕಿನಲ್ಲಿ ಬಿಎಸ್ ಎನ್ ಎಲ್ ನೆಟ್ ವರ್ಕ್ ಸಮಸ್ಯೆ ಕುರಿತು ಜಿಲ್ಲಾಧಿಕಾರಿ ಜೊತೆ ಸಂಸದ...

ಸುಳ್ಯ ತಾಲೂಕಿನಲ್ಲಿ ಬಿಎಸ್ ಎನ್ ಎಲ್ ನೆಟ್ ವರ್ಕ್ ಸಮಸ್ಯೆ ಕುರಿತು ಜಿಲ್ಲಾಧಿಕಾರಿ ಜೊತೆ ಸಂಸದ ಬ್ರಿಜೇಶ್ ಚೌಟ ಚರ್ಚೆ

- Advertisement -
- Advertisement -

ಮಂಗಳೂರು: ಸುಳ್ಯ ತಾಲೂಕಿನ ಹಲವು ಕಡೆಗಳಲ್ಲಿ ಸಾರ್ವಜನಿಕರು ಎದುರಿಸುತ್ತಿರುವ ಬಿಎಸ್ ಎನ್ ಎಲ್ ಮೊಬೈಲ್ ನೆಟ್ ವರ್ಕ್ ಸಮಸ್ಯೆಯ ಕುರಿತಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಯಿತು.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರನ್ನು ಭೇಟಿ ಮಾಡಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ನೆಟ್ ವರ್ಕ್ ಸಮಸ್ಯೆ ಪರಿಹರಿಸುವ ಕುರಿತಂತೆ ಚರ್ಚೆ ನಡೆಸಿದರು.

ಇದೇ ವೇಳೆ ಉಳ್ಳಾಲ ತಾಲೂಕಿನ ಉಚ್ಚಿಲದಲ್ಲಿ ಸ್ಥಳೀಯರ ಕಂದಾಯ ಇಲಾಖೆಗೆ ಸಂಬಂಧಪಟ್ಟ ಸಮಸ್ಯೆಯ ಕುರಿತು ಕೂಡಾ ಸಂಸದ ಚೌಟ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಕೈಗೊಳ್ಳಬಹುದಾದ ಸೂಕ್ತ ಪರಿಹಾರ ಕಾರ್ಯದ ಕುರಿತು ಚರ್ಚಿಸಿದರು.

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಈ ಸಂಧರ್ಭದಲ್ಲಿ ಉಪಸ್ಥಿತರಿದ್ದರು

- Advertisement -

Latest News

error: Content is protected !!