ಮುಂಬೈ: ಲೋಕಸಭಾ ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮತ್ತು ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಮುಂಬೈನಲ್ಲಿ ಭಾಯಂದರ್ ಫಾಸ್ಟ್ ರೈಲಿನಲ್ಲಿ ಪ್ರಯಾಣಿಸಿದ್ದಾರೆ.
ಮುಂಬೈನ ಕಾಂದಿವಲಿಯಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸುವ ಸಲುವಾಗಿ ಬ್ರಿಜೇಶ್ ಚೌಟ
ಅಂಧೇರಿಯಿಂದ ಬೊರಿವಿಲಿಯವರೆಗೆ ರೈಲಿನಲ್ಲಿ ಪ್ರಯಾಣ ಮಾಡಿದರು.
ಇದೇ ವೇಳೆ, ಮುಂಬೈ ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಿಯೂಷ್ ಗೋಯೆಲ್ ಅವರ ಚುನಾವಣಾ ಪ್ರಚಾರ ಕಾರ್ಯಕ್ರಮದ ಅಂಗವಾಗಿ ಕಾಂದಿವಲಿಯಲ್ಲಿ ಗೋಪಾಲ್ ಶೆಟ್ಟಿ ತುಳು – ಕನ್ನಡಿಗ ಅಭಿಮಾನಿ ಬಳಗವು ಆಯೋಜಿಸಿದ ಸಭೆಯಲ್ಲಿ ಕೂಡಾ ಕ್ಯಾಪ್ಟನ್ ಬ್ರಿಜೇಶ್ ಚೌಟ ಪಾಲ್ಗೊಂಡಿದ್ದರು.
ಮುಂಬೈ ಉತ್ತರ ಲೋಕಸಭಾ ಕ್ಷೇತ್ರದ ಸಂಸದ ಗೋಪಾಲ್ ಶೆಟ್ಟಿ ಮತ್ತು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಕೂಡಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಈ ಮಧ್ಯೆ, ಮುಂಬೈ ಉತ್ತರ ಸಂಸದ ಗೋಪಾಲ್ ಶೆಟ್ಟಿ ಅವರ ಮುಂಬೈನಲ್ಲಿರುವ ನಿವಾಸಕ್ಕೆ ಕೂಡಾ ಬ್ರಿಜೇಶ್ ಚೌಟ ಭೇಟಿ ನೀಡಿದ್ದರು