Sunday, June 7, 2026
Homeಕರಾವಳಿಮಂಗಳೂರುಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನಕ್ಕೆ ನೂತನ ಸಂಸದ ಬ್ರಿಜೇಶ್ ಚೌಟ ಭೇಟಿ ನೀಡಿ ಪ್ರಾರ್ಥನೆ

ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನಕ್ಕೆ ನೂತನ ಸಂಸದ ಬ್ರಿಜೇಶ್ ಚೌಟ ಭೇಟಿ ನೀಡಿ ಪ್ರಾರ್ಥನೆ

- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ನೂತನ ಸಂಸದರಾಗಿ ಆಯ್ಕೆಯಾಗಿರುವ ಕ್ಯಾಪ್ಟನ್ ಬ್ರಿಜೇಶ್ ಚೌಟ ಇಂದು ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು.

ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಬ್ರಿಜೇಶ್ ಚೌಟ, ಬಳಿಕ ನಾರಾಯಣ ಗುರುಗಳ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.ಇದೇ ವೇಳೆ ದೇವಸ್ಥಾನದ ವತಿಯಿಂದ ಬ್ರಿಜೇಶ್ ಚೌಟ ಅವರನ್ನು ಗೌರವಿಸಲಾಯಿತು.

ಈ ವೇಳೆ ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಮುಖಂಡ ಹರಿಕೃಷ್ಣ ಬಂಟ್ವಾಳ ಮತ್ತು ಇತರರು ಉಪಸ್ಥಿತರಿದ್ದರು.

- Advertisement -

Latest News

error: Content is protected !!