Thursday, June 4, 2026
Homeಮಹಾನ್ಯೂಸ್ಮುಂಬೈನಲ್ಲಿ ಕಾಳ ಭೈರವ ದೇವಸ್ಥಾನಕ್ಕೆ ಕ್ಯಾ. ಬ್ರಿಜೇಶ್ ಚೌಟ ಭೇಟಿ

ಮುಂಬೈನಲ್ಲಿ ಕಾಳ ಭೈರವ ದೇವಸ್ಥಾನಕ್ಕೆ ಕ್ಯಾ. ಬ್ರಿಜೇಶ್ ಚೌಟ ಭೇಟಿ

- Advertisement -
- Advertisement -

ಮುಂಬೈ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮತ್ತು ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಮುಂಬೈನ ಜೋಗೇಶ್ವರಿ ಶ್ರೀ ಜಗದಂಬಾ ಕಾಳಭೈರವ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಇದೇ ಸಂದರ್ಭದಲ್ಲಿ ಬ್ರಿಜೇಶ್ ಚೌಟ, ಮುಂಬೈನಲ್ಲಿ ನೆಲೆಸಿರುವ ದಕ್ಷಿಣ ಕನ್ನಡ ಮೂಲದ ಜನರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಇದೇ ವೇಳೆ ಮುಂಬೈ ಉತ್ತರ ಕೇಂದ್ರ ಲೋಕಸಭಾ ಕ್ಷೇತ್ರದ ಬಿಜೆಪಿ ‌ಅಭ್ಯರ್ಥಿ ಉಜ್ವಲ್ ನಿಕ್ಕಂ ಅವರ ಪರವಾಗಿ ಪ್ರಚಾರ ಕಾರ್ಯಕ್ರಮದಲ್ಲಿ ಕೂಡಾ ಪಾಲ್ಗೊಂಡ ಕ್ಯಾಪ್ಟನ್ ಬ್ರಿಜೇಶ್ ಚೌಟ ಮತಯಾಚನೆ ಮಾಡಿದರು.ಬಿಜೆಪಿ ಕರ್ನಾಟಕ ಸೆಲ್, ಮುಂಬೈ ಚುನಾವಣಾ ಪ್ರಚಾರ ಸಭೆಯನ್ನು ಆಯೋಜಿಸಿತ್ತು

- Advertisement -

Latest News

error: Content is protected !!