Sunday, May 5, 2024
Homeತಾಜಾ ಸುದ್ದಿಗ್ರಾಮ ಒನ್ ಗೆ ಇನ್ನಷ್ಟು ಸೇವೆ ಸೇರ್ಪಡೆಗೆ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ

ಗ್ರಾಮ ಒನ್ ಗೆ ಇನ್ನಷ್ಟು ಸೇವೆ ಸೇರ್ಪಡೆಗೆ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ

spot_img
- Advertisement -
- Advertisement -

ಬೆಂಗಳೂರು: ಗ್ರಾಮ ಪಂಚಾಯತ್ ಮಟ್ಟದಲ್ಲಿಯೇ ನಾಗರಿಕ ಸೇವೆಗಳನ್ನು ಒದಗಿಸಲು ಪ್ರಾರಂಭಿಸಲಾಗಿರುವ ಗ್ರಾಮ ಒನ್ ಕೇಂದ್ರಗಳನ್ನು ಬಲಪಡಿಸಲು ಇನ್ನಷ್ಟು ಸೇವೆಗಳನ್ನು ಸೇರ್ಪಡೆಗೊಳಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ.

ನಿನ್ನೆ ಬೆಂಗಳೂರಿನಲ್ಲಿ ಇ-ಆಡಳಿತ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಸಿಎಂ, ಗ್ರಾಮ ಒನ್ ಕೇಂದ್ರಗಳ ಮೂಲಕ ಒದಗಿಸಬಹುದಾದ ಸೇವೆಗಳನ್ನು ಗುರುತಿಸಿ, ಸಂಬಂಧಿಸಿದ ಇಲಾಖೆಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ‌ನೀಡಿದ್ದಾರೆ.

ಅಲ್ಲದೇ ವಿವಿಧ ಜಿಲ್ಲೆಗಳಿಗೆ ವಿಶಿಷ್ಟವಾದ ಸೇವೆಗಳನ್ನು ಆಯಾ ಜಿಲ್ಲೆಗಳಿಗೆ ಸೀಮಿತಗೊಳಿಸಿ ಗ್ರಾಮ ಒನ್ ಕೇಂದ್ರಗಳಲ್ಲಿ ಒದಗಿಸಬೇಕು. ಜೊತೆಗೆ ಮೈಕ್ರೋ ಬ್ಯಾಂಕಿಂಗ್, ಎಲ್ ಪಿ ಜಿ ಬುಕಿಂಗ್ ಮತ್ತಿತರ ಕೆಲವು ಸೇವೆಗಳನ್ನು ಒದಗಿಸಲು ಅವಕಾಶ ಕಲ್ಪಿಸಬಹುದು ಎಂದು ಸಭೆಯಲ್ಲಿ ಸಿಎಂ ತಿಳಿಸಿದ್ದಾರೆ.

ಇನ್ನು ಹೋಬಳಿ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಟಲ್ ಜನಸ್ನೇಹಿ ಕೇಂದ್ರಗಳ ಸೇವೆಯನ್ನು ಗ್ರಾಮ ಒನ್ ಮೂಲಕವೂ ಒದಗಿಸುವ ಬಗ್ಗೆ ಪ್ರಾಯೋಗಿಕವಾಗಿ ಕೆಲವು ಕೇಂದ್ರಗಳಲ್ಲಿ ಪ್ರಾರಂಭಿಸಲು ಮುಖ್ಯಮಂತ್ರಿ ಬೊಮ್ಮಾಯಿ ಸಭೆಯಲ್ಲಿ ಸೂಚಿಸಿದ್ದಾರೆ.

- Advertisement -
spot_img

Latest News

error: Content is protected !!