Monday, April 29, 2024
Homeತಾಜಾ ಸುದ್ದಿಬ್ರಿಟನ್ ಪ್ರಧಾನಿ ಬೋರಿಸ್ ಭಾರತ ಭೇಟಿ- ಪ್ರಧಾನಿ ಮೋದಿ ಜೊತೆ ಸುದೀರ್ಘ ಮಾತುಕತೆ

ಬ್ರಿಟನ್ ಪ್ರಧಾನಿ ಬೋರಿಸ್ ಭಾರತ ಭೇಟಿ- ಪ್ರಧಾನಿ ಮೋದಿ ಜೊತೆ ಸುದೀರ್ಘ ಮಾತುಕತೆ

spot_img
- Advertisement -
- Advertisement -

ಲಂಡನ್‌: ಬೋರಿಸ್‌ ಜಾನ್ಸನ್‌ ಮುಂದಿನ ವಾರ ಎರಡು ದಿನಗಳ ಭಾರತ ಭೇಟಿಗೆ ಬರಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಸುದೀರ್ಘ ಮಾತುಕತೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

ಬೋರಿಸ್‌ ಅವರು ಪ್ರಧಾನಿಯಾದ ನಂತರ ಇದೇ ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ. ಏಪ್ರಿಲ್‌ 21ರಂದು ಅವರ ಪ್ರಯಾಣ ಆರಂಭವಾಗಲಿದೆ. ಬ್ರಿಟನ್‌ ಮತ್ತು ಭಾರತದಲ್ಲಿನ ಪ್ರಮುಖ ವಲಯಗಳಲ್ಲಿನ ಹೂಡಿಕೆಗಳ ಕುರಿತು ಘೋಷಣೆಯಾಗಲಿವೆ ಎಂದು ಡೌನಿಂಗ್‌ ಸ್ಟ್ರೀಟ್‌ ಪ್ರಕಟಣೆಯಲ್ಲಿ ತಿಳಿಸಿದೆ.

ಏಪ್ರಿಲ್‌ 22ರಂದು ನವದೆಹಲಿಯಲ್ಲಿ ಬೋರಿಸ್‌ ಜಾನ್ಸನ್‌ ಮತ್ತು ನರೇಂದ್ರ ಮೋದಿ ಭೇಟಿ ನಡೆಯಲಿದೆ. ಅಲ್ಲಿ ಭಾರತ ಮತ್ತು ಬ್ರಿಟನ್‌ ನಡುವಿನ ರಕ್ಷಣಾ ಕಾರ್ಯತಂತ್ರ, ರಾಜತಾಂತ್ರಿಕತೆ ಮತ್ತು ಆರ್ಥಿಕತೆಯ ಪಾಲುದಾರಿಕೆ, ಮುಕ್ತ ವ್ಯಾಪಾರ ಒಪ್ಪಂದ(ಎಫ್‌ಟಿಎ) ಸಂಬಂಧಿಸಿದಂತೆ ಮಾತುಕತೆ ಆಗಲಿದೆ.

‘ನನ್ನ ಭಾರತದ ಭೇಟಿಯ ವೇಳೆ ಉಭಯ ರಾಷ್ಟ್ರಗಳಿಗೆ ಮುಖ್ಯವಾಗಿರುವ ವಿಚಾರಗಳನ್ನು ಪ್ರಸ್ತಾಪಿಸಲಿದ್ದೇನೆ. ಉದ್ಯೋಗ ಸೃಷ್ಟಿಯಿಂದ ಹಿಡಿದು, ಆರ್ಥಿಕತೆ ವೃದ್ಧಿ, ಇಂಧನ ಹಾಗೂ ರಕ್ಷಣಾ ಕ್ಷೇತ್ರದ ವಿಷಯಗಳನ್ನು ಒಳಗೊಂಡಿರಲಿವೆ’ ಎಂದು ಬೋರಿಸ್‌ ಹೇಳಿದ್ದಾರೆ.

- Advertisement -
spot_img

Latest News

error: Content is protected !!