Friday, June 5, 2026
Homeಕರಾವಳಿವಿಟ್ಲದಲ್ಲಿ ಅಣ್ಣ ತಮ್ಮ ಆತ್ಮಹತ್ಯೆಗೆ ಯತ್ನ

ವಿಟ್ಲದಲ್ಲಿ ಅಣ್ಣ ತಮ್ಮ ಆತ್ಮಹತ್ಯೆಗೆ ಯತ್ನ

- Advertisement -
- Advertisement -

ವಿಟ್ಲ: ಅಣ್ಣ ತಮ್ಮ  ಇಬ್ಬರೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವಿಟ್ಲದ ಕುದ್ದುಪದವು ಎಂಬಲ್ಲಿ ನಡೆದಿದೆ. ಅಜ್ಜಿ ಮನೆಯಲ್ಲಿ ವಾಸಿಸುತ್ತಿದ್ದ ಸಹೋದರರಿಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.ಕುದ್ದುಪದವು ನಿವಾಸಿ ಪವನ್ ಹಾಗೂ ಪೃಥ್ವಿರಾಜ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದವರು.

 ಇಬ್ಬರನ್ನು ಕೂಡ ವಿಟ್ಲ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದ್ದು, ಅವರಲ್ಲಿ ಓರ್ವ ಗಂಭೀರವಾಗಿದ್ದು,ಆತನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪವನ್ ಮತ್ತು ಪೃಥ್ವಿರಾಜ್ ತಂದೆ ಮೃತಪಟ್ಟಿದ್ದು, ತಾಯಿ ಮೈರದಲ್ಲಿ ವಾಸವಾಗಿದ್ದಾರೆ. ಇವರಿಬ್ಬರು ಅಜ್ಜಿ ಮನೆಯಲ್ಲಿ ವಾಸವಾಗಿದ್ದರು .ಆತ್ಮಹತ್ಯೆ ಯತ್ನಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

- Advertisement -

Latest News

error: Content is protected !!