Friday, November 8, 2024
Homeಕರಾವಳಿಉಡುಪಿಉಡುಪಿ: ಮೂರೂವರೆ ವರ್ಷದ ಮಗುವಿನ ಮೈಮೇಲೆ ಮಾರಣಾಂತಿಕ ಗಾಯಗಳು; ಆಸ್ಪತ್ರೆಗೆ ಕರೆತಂದಾಗ ಬಯಲಾದ ಕೃತ್ಯ

ಉಡುಪಿ: ಮೂರೂವರೆ ವರ್ಷದ ಮಗುವಿನ ಮೈಮೇಲೆ ಮಾರಣಾಂತಿಕ ಗಾಯಗಳು; ಆಸ್ಪತ್ರೆಗೆ ಕರೆತಂದಾಗ ಬಯಲಾದ ಕೃತ್ಯ

spot_img
- Advertisement -
- Advertisement -

ಉಡುಪಿ: ಮೂರೂವರೆ ವರ್ಷದ ಮಗುವಿನ ಮೇಲೆ ಮಾರಣಾಂತಿಕ ಹಲ್ಲೆ ನಡೆದಿರುವ ಘಟನೆ ಉಡುಪಿಯಲ್ಲಿ ಬೆಳಕಿಗೆ ಬಂದಿದೆ.ಪ್ರೇರಿತ್ ಎಂಬ ಮಗುವನ್ನು ಗುರುವಾರ ಬೆಳಗ್ಗೆ ಉಡುಪಿ ಸರ್ಕಾರಿ ಆಸ್ಪತ್ರೆಗೆ ತಾಯಿ ಅನಾರೋಗ್ಯದ ಕಾರಣಕ್ಕೆ ಚಿಕಿತ್ಸೆಗೆಂದು ಕರೆತಂದಿದ್ದ ವೇಳೆ ಮೇಲೆ ತೀವ್ರ ಗಾಯಗಳು ಪತ್ತೆಯಾಗಿವೆ.

ಮಗುವಿನ ದೇಹದ ಮೇಲಿನ ಗಾಯಗಳನ್ನು ನೋಡಿ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆರೋಗ್ಯಾಧಿಕಾರಿ ಕೆಎಂಸಿ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಕೂಡಾ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ.ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ನೀಡಿದ ದೂರಿನನ್ವಯ ಅಮಾಸೆಬೈಲು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಗುವಿನ ದೇಹದ ಮೇಲಿನ ಗಾಯಗಳ ಬಗ್ಗೆ ತಾಯಿ ಪೂರ್ಣ ಪ್ರಿಯಾ ಕೂಡಾ ಯಾವುದೇ ಮಾಹಿತಿ ನೀಡದೇ ಇದ್ದು, ಮಗು ಪ್ರಜ್ಞಾಹೀನ ಸ್ಥಿತಿಯಲ್ಲಿರುವುದರಿಂದ ಗಾಯಗಳ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಗಾಯಗಳ ಬಗ್ಗೆ ತನಿಖೆ ನಡೆಸಲು ಮುಂದಾಗಿದ್ದಾರೆ.

- Advertisement -
spot_img

Latest News

error: Content is protected !!