Saturday, June 6, 2026
Homeತಾಜಾ ಸುದ್ದಿಬಿ.ಎಸ್.ಯಡಿಯೂರಪ್ಪ ಅವರ ಮೊಮ್ಮಗಳು ಆತ್ಮಹತ್ಯೆಗೆ ಶರಣು

ಬಿ.ಎಸ್.ಯಡಿಯೂರಪ್ಪ ಅವರ ಮೊಮ್ಮಗಳು ಆತ್ಮಹತ್ಯೆಗೆ ಶರಣು

- Advertisement -
- Advertisement -

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮೊಮ್ಮಗಳು ಆತ್ಮಹತ್ಯೆಗೆ ಶರಣಾಗಿದ್ದಾರೆಂದು ಎಂಬ ಮಾಹಿತಿ ಲಭ್ಯವಾಗಿದೆ.

ಬಿಎಸ್ ಯಡಿಯೂರಪ್ಪ ಅವರ ಪುತ್ರಿ ಪದ್ಮಪತಿಯವರ ಮಗಳು ಸೌಂದರ್ಯ (30) ಮನೆಯಲ್ಲಿಯೇ ಫ್ಯಾನ್‌ಗೆ ನೇಣು ಬೀಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯೆಯಾಗಿದ್ದ ಸೌಂದರ್ಯ ಕಳೆದ ಕೆಲವು ದಿನಗಳ ಹಿಂದೆ ಖಿನ್ನತೆಗೆ ಜಾರಿದ್ದರು. ಈ ಹಿನ್ನಲೆ ಅವರು ಮಲ್ಲಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದರು, ಅವರಿಗೆ ಒಂದು ಆರು ತಿಂಗಳ ಪುಟ್ಟ ಮಗು ಕೂಡ ಇದೆ.

ಸೌಂದರ್ಯ ಪತಿ ನೀರಜ್​ ಕೂಡ ವೈದ್ಯರಾಗಿದ್ದರು. ಇಂದು ಎಂದಿನಂತೆ ಅವರು ಆಸ್ಪತ್ರೆಗೆ ತೆರಳಿದ ಬಳಿಕ ಸೌಂದರ್ಯ ಈ ಕೃತ್ಯಕ್ಕೆ ಮುಂದಾಗಿದ್ದಾರೆ. ಮನೆಕೆಲಸದವರು ಬಂದು ಎಷ್ಟು ಬಡಿದರೂ ಸೌಂದರ್ಯ ರೂಮಿನ ಬಾಗಿಲು ತೆರೆಯಲಿಲ್ಲ ಬಳಿಕ ನೀರಜ್​ಗೆ ಕರೆ ಮಾಡಿದ್ದಾರೆ. ಆಸ್ಪತ್ರೆಯಿಂದ ಬಂದ ವೈದ್ಯ ನೀರಜ್​ ಬಾಗಿಲು ಮುರಿದು ಒಳ ಹೋದಾಗ ಅವರು ಫ್ಯಾನ್​ಗೆ ನೇಣು ಹಾಕಿಕೊಂಡಿದ್ದರು.

ತಕ್ಷಣಕ್ಕೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸಲಿಲ್ಲ. ಮೊಮ್ಮಗಳು ಸಾವನ್ನಪ್ಪಿದ ಸುದ್ದಿ ತಿಳಿಯುತ್ತಿದ್ದಂತೆ ಬಿಎಸ್​​ ಯಡಿಯೂರಪ್ಪ ಮತ್ತು ಸಿಎಂ ಸೇರಿದಂತೆ ಅನೇಕ ಬಿಜೆಪಿ ಶಾಸಕರು ಇದೀಗ ಬೌರಿಂಗ್​ ಆಸ್ಪತ್ರೆಗೆ ತೆರಳಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಇದೀಗ ಮೃತ ಸೌಂದರ್ಯ ಅವರ ಕರೆಗಳನ್ನು ಸಂಗ್ರಹಿಸಿದ್ದು, ಎಲ್ಲಾ ಆಯಾಮದಲ್ಲೂ ತನಿಖೆಗೆ ಮುಂದಾಗಿದ್ದಾರೆ

- Advertisement -

Latest News

error: Content is protected !!