Friday, June 5, 2026
Homeತಾಜಾ ಸುದ್ದಿ"ಅಣ್ಣಾಮಲೈ ಬಿಜೆಪಿ ಸೇರುತ್ತಿರುವುದು ನನಗೆ ಗೊತ್ತಿಲ್ಲ"

“ಅಣ್ಣಾಮಲೈ ಬಿಜೆಪಿ ಸೇರುತ್ತಿರುವುದು ನನಗೆ ಗೊತ್ತಿಲ್ಲ”

- Advertisement -
- Advertisement -

ಬೆಂಗಳೂರು: ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿ ರಾಜೀನಾಮೆ ನೀಡಿರುವ ಸಿಂಗಂ ಖ್ಯಾತಿಯ ಅಣ್ಣಾಮಲೈ ಅವರು ಇಂದು ಬಿಜೆಪಿ ಸೇರ್ಪಡೆಯಾಗಲಿದ್ದು, ಈ ಬಗ್ಗೆ ಸಿಎಂ ಬಿ.ಎಸ್. ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.

ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಬಿಜೆಪಿ ಸೇರ್ಪಡೆ ವಿಚಾರ ನನಗೇ ಗೊತ್ತಿಲ್ಲ ಎಂದಿದ್ದಾರೆ. ಹೀಗಾಗಿ ಸಿಎಂ ಯಡಿಯೂರಪ್ಪ ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಬಿಜೆಪಿ ಹೈಕಮಾಂಡ್ ಅಣ್ಣಾಮಲೈ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಿದೆಯಾ ಎಂಬ ಚರ್ಚೆ ಹುಟ್ಟುಹಾಕಿದೆ. ಅಣ್ಣಾಮಲೈ ಅವರ ಬಿಜೆಪಿ ಸೇರ್ಪಡೆ ವಿಚಾರದಲ್ಲಿ ಯಡಿಯೂರಪ್ಪ ಅವರನ್ನು ನಿರ್ಲಕ್ಷ್ಯ ಮಾಡಲಾಗಿದೆ ಎಂಬುದು ಕುತೂಹಲ ಮೂಡಿಸಿದೆ.

ಅಣ್ಣಾಮಲೈ ಅವರು ಬೆಂಗಳೂರು, ಚಿಕ್ಕಮಗಳೂರು ಸೇರಿದಂತೆ ಹಲವೆಡೆ ದಕ್ಷತೆಯಿಂದ ಕಾರ್ಯನಿರ್ವಹಿಸಿ ಸ್ವಯಂ ನಿವೃತ್ತಿ ಪಡೆದು ಬಿಜೆಪಿ ಸೇರುತ್ತಿದ್ದಾರೆ. ಅವರು ಬಿಜೆಪಿ ಸೇರುತ್ತಿರುವುದು ನನಗೆ ಅತೀವ ಸಂತೋಷ ತಂದಿದೆ. ಅವರಿಗೆ ಹೃದಯಪೂರ್ವಕ ಸ್ವಾಗತ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಅವರು ಟ್ವೀಟ್ ಮಾಡಿದ್ದಾರೆ.

- Advertisement -

Latest News

error: Content is protected !!