Saturday, June 27, 2026
Homeಶಿವಮೊಗ್ಗಹೋರಿ ಬೆದರಿಸುವ ಹಬ್ಬದಲ್ಲಿ ಓಡುವ ರಭಸದಲ್ಲಿ ಕೆರೆಗೆ ಹಾರಿ ಮೃತಪಟ್ಟ ಹೋರಿ

ಹೋರಿ ಬೆದರಿಸುವ ಹಬ್ಬದಲ್ಲಿ ಓಡುವ ರಭಸದಲ್ಲಿ ಕೆರೆಗೆ ಹಾರಿ ಮೃತಪಟ್ಟ ಹೋರಿ

- Advertisement -
- Advertisement -

ಶಿವಮೊಗ್ಗ: ಹೋರಿ ಬೆದರಿಸುವ ಹಬ್ಬದ ವೇಳೆ ಹೋರಿಯೊಂದು ಓಡುವ ರಭಸದಲ್ಲಿ ಕೆರೆಗೆ ಹಾರಿ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.

ಶಿಕಾರಿಪುರ ತಾಲೂಕು ಹುಲಗಿನಕೊಪ್ಪ ಗ್ರಾಮದಲ್ಲಿ ಆಯೋಜಿಸಿದ್ದ ಹೋರಿ ಬೆದರಿಸುವ ಹಬ್ಬದಲ್ಲಿ ಈ ಘಟನೆ ಸಂಭವಿಸಿದೆ.

ಹೋರಿ ಹಬ್ಬದಲ್ಲಿ ಬೇರೆ ಬೇರೆ ಜಿಲ್ಲೆಗಳಿಂದ ಅನೇಕ ಹೋರಿಗಳು ಭಾಗಿಯಾಗಿದ್ದು, ಈ ವೇಳೆ ನಾಗರಾಜ್‌ ಜಂಬೂರು ಎಂಬವರಿಗೆ ಸೇರಿದ ಮುಗಳಿಕೊಪ್ಪದ ಮುತ್ತು ಎಂಬ ಹೆಸರಿನ ಹೋರಿ ಹುಲಗಿನಕಟ್ಟೆ ಕೆರೆಗೆ ಹಾರಿದೆ.

ಕೂಡಲೇ ಗ್ರಾಮಸ್ಥರು ಕೆರೆಗೆ ಇಳಿದು ಹೋರಿಯನ್ನು ದಡಕ್ಕೆ ಎಳೆದು ತಂದರಾದರೂ ದಡಕ್ಕೆ ತರುವಷ್ಟರಲ್ಲಿ ಹೋರಿ ಮೃತಪಟ್ಟಿತ್ತು. ಹಬ್ಬದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಆಯೋಜಕರು ಬೇಲಿ ಹಾಕಿ ಸುರಕ್ಷತಾ ಕ್ರಮ ಕೈಗೊಂಡಿದ್ದರೂ ಹೋರಿ ಕೆರೆಗೆ ಹಾರಿ ಮೃತಪಟ್ಟಿದೆ.

- Advertisement -

Latest News

error: Content is protected !!