Saturday, June 6, 2026
Homeಕರಾವಳಿಉಡುಪಿಉಡುಪಿ: ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಗುತ್ತಿಗೆದಾರ ಸಾವು

ಉಡುಪಿ: ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಗುತ್ತಿಗೆದಾರ ಸಾವು

- Advertisement -
- Advertisement -

ಉಡುಪಿ: ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಗುತ್ತಿಗೆದಾರೊಬ್ಬರು ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ಘಟನೆ ಉಡುಪಿಯಲ್ಲಿ ನಡೆದಿದೆ.

ಉಡುಪಿಯ ತೆಕ್ಕಟ್ಟೆಯ ಕೆಂಚಿಗಾರ್ ಬೆಟ್ಟು ನಿವಾಸಿ ಸುರೇಂದ್ರ ದೇವಾಡಿಗ (43) ಕೆಲ ದಿನಗಳ ಹಿಂದೆ ತೆಕ್ಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಅವರ ತಲೆಗೆ ತೀವ್ರ ಗಾಯವಾದ್ದರಿಂದ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಆದರೆ ಚಿಕಿತ್ಸೆ ಫಲಿಸದೇಅವರು ಸಾವನ್ನಪ್ಪಿದ್ದಾರೆ.

ಹಲವು ಸಮಾಜಮುಖಿ ಕೆಲಸಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ಅವರು ಗುತ್ತಿಗೆದಾರರಾಗಿ ಸಾಕಷ್ಟು ಹೆಸರು ಗಳಿಸಿದ್ದರು.

- Advertisement -

Latest News

error: Content is protected !!