Friday, June 5, 2026
Homeತಾಜಾ ಸುದ್ದಿಮಹಾರಾಷ್ಟ್ರದಲ್ಲಿ ವಾಣಿಜ್ಯ ಕಟ್ಟಡ ಕುಸಿತ; 8 ಮಂದಿ ಸಿಲುಕಿರುವ ಶಂಕೆ

ಮಹಾರಾಷ್ಟ್ರದಲ್ಲಿ ವಾಣಿಜ್ಯ ಕಟ್ಟಡ ಕುಸಿತ; 8 ಮಂದಿ ಸಿಲುಕಿರುವ ಶಂಕೆ

- Advertisement -
- Advertisement -

ಮಹಾರಾಷ್ಟ್ರ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಂಡಿಯಲ್ಲಿ ವಾಣಿಜ್ಯ ಕಟ್ಟಡವೊಂದು ಇಂದು ಬೆಳಿಗ್ಗೆ ಕುಸಿದಿದೆ. ಕಟ್ಟಡದ ಅಡಿ 8 ಮಂದಿ ಸಿಲುಕಿರುವ ಶಂಕೆಯಿದೆ ಎಂದು ಹೇಳಲಾಗುತ್ತಿದೆ.

‘ಮಂಕೋಲಿ ನಾಕಾದ ಹರಿಹರ್‌ ಕಾಂಪೌಂಡ್‌ನಲ್ಲಿರುವ ಒಂದು ಅಂತಸ್ತಿನ ಗೋದಾಮು ಬೆಳಿಗ್ಗೆ 10.30 ಕ್ಕೆ ಕುಸಿದಿದೆ’ ಎಂದು ಥಾಣೆಯ ಪ್ರಾದೇಶಿಕ ವಿಪತ್ತು ನಿರ್ವಹಣಾ ಇಲಾಖೆಯ ಮುಖ್ಯಸ್ಥ ಸಂತೋಷ್‌ ಕದಂ ಅವರು ಮಾಹಿತಿ ನೀಡಿದ್ದಾರೆ.

‘ಗೋದಾಮಿನಲ್ಲಿ ಕೆಲಸ ಮಾಡುತ್ತಿದ್ದ ಏಳರಿಂದ ಎಂಟು ಮಂದಿ ಕಾರ್ಮಿಕರು, ಕಟ್ಟಡದ ಅವಶೇಷಗಳಡಿ ಸಿಲುಕಿರುವ ಶಂಕೆಯಿದೆ. ಥಾಣೆ ಜಿಲ್ಲಾ ರಕ್ಷಣಾ ಪಡೆಯ ಸಿಬ್ಬಂದಿ, ವಿಪತ್ತು ನಿರ್ವಹಣಾ ಇಲಾಖೆ ಮತ್ತು ಅಗ್ನಿ ಶಾಮಕ ದಳದ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ’ ಎಂದು ಅವರು ಹೇಳಿದ್ದಾರೆ. ಸ್ಥಳಕ್ಕೆ ಎನ್‌ಡಿಆರ್‌ಎಫ್‌ ತಂಡ ಆಗಮಿಸಿದ್ದು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ. 

- Advertisement -

Latest News

error: Content is protected !!