Saturday, May 4, 2024
Homeತಾಜಾ ಸುದ್ದಿಬೈಕ್ ನಲ್ಲಿ ತೆರಳುತ್ತಿದ್ದಾಗ ಚಕ್ರಕ್ಕೆ ಬುರ್ಖಾ ಸಿಲುಕಿ ಯುವತಿ ಸಾವು : ದ್ವಿಚಕ್ರ ವಾಹನದಲ್ಲಿ...

ಬೈಕ್ ನಲ್ಲಿ ತೆರಳುತ್ತಿದ್ದಾಗ ಚಕ್ರಕ್ಕೆ ಬುರ್ಖಾ ಸಿಲುಕಿ ಯುವತಿ ಸಾವು : ದ್ವಿಚಕ್ರ ವಾಹನದಲ್ಲಿ ಕೂರುವಾಗ ಇರಲಿ ಎಚ್ಚರ

spot_img
- Advertisement -
- Advertisement -

ಹೈದರಾಬಾದ್: ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಚಕ್ರಕ್ಕೆ ಬುರ್ಖಾ ಸಿಲುಕಿ ಬೈಕ್ ನಿಂದ ಬಿದ್ದು ಯುವತಿ ಸಾವನ್ನಪ್ಪಿರುವ ಘಟನೆ ಹೈದರಾಬಾದ್ ನ ಯಾಚಾರಂ ಜಿಲ್ಲೆಯಲ್ಲಿ ನಡೆದಿದೆ. ಮಹಿಳೆ ಬೈಕ್ ನಿಂದ ಬೀಳುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

18 ವರ್ಷದ ಯುವತಿ ಮತ್ತು ಆಕೆಯ ಸಹೋದರ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಈ ಘಟನೆ ನಡೆದಿದೆ. ವೀಡಿಯೋದಲ್ಲಿರುವ ಯುವತಿ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ.

ಈ ಬಗ್ಗೆ ಟಿಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ವಿಸಿ ಸಜ್ಜನರ್ ಪ್ರತಿಕ್ರಿಯಿಸಿ, ಮಹಿಳೆಯರು ಬೈಕ್‌ನಲ್ಲಿ ಕುಳಿತುಕೊಳ್ಳುವಾಗ ಜಾಗರೂಕರಾಗಿರಿ ಎಂದು ಟ್ವೀಟ್ ನಲ್ಲಿ ಕೇಳಿಕೊಂಡಿದ್ದಾರೆ.

- Advertisement -
spot_img

Latest News

error: Content is protected !!