Wednesday, June 24, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಎಸ್ಐಟಿ ಸಲ್ಲಿಸಿದ ವರದಿ ಪ್ರಕರಣ: ತನಿಖೆ ನಡೆಸಿ ಅಂತಿಮ ವರದಿ ಸಲ್ಲಿಸಲು ಸೂಚನೆ

ಬೆಳ್ತಂಗಡಿ : ಎಸ್ಐಟಿ ಸಲ್ಲಿಸಿದ ವರದಿ ಪ್ರಕರಣ: ತನಿಖೆ ನಡೆಸಿ ಅಂತಿಮ ವರದಿ ಸಲ್ಲಿಸಲು ಸೂಚನೆ

- Advertisement -
- Advertisement -

ಬೆಳ್ತಂಗಡಿ : ಬುರುಡೆ ಷಡ್ಯಂತ್ರ ಪ್ರಕರಣ ಬಗ್ಗೆ ಎಸ್ಐಟಿ ಅಧಿಕಾರಿಗಳು ಬೆಳ್ತಂಗಡಿ ಕೋರ್ಟ್ ಗೆ 215 ಅಡಿಯಲ್ಲಿ ವರದಿಯನ್ನು ಸಲ್ಲಿಸಲು ಜ.3 ಕ್ಕೆ ಸೂಚನೆ ನೀಡಿದ್ದಾರೆ.

ಬೆಳ್ತಂಗಡಿ ಎಸ್ಐಟಿ ಅಧಿಕಾರಿಗಳು ಬೆಳ್ತಂಗಡಿ ನ್ಯಾಯಾಲಯಕ್ಕೆ ನ.20 ರಂದು ‘ಸುಳ್ಳು ಸಾಕ್ಷಿ’ ವರದಿಯನ್ನು (u/s)215 ಅಡಿಯಲ್ಲಿ ಚಿನ್ನಯ್ಯ , ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಜಯಂತ್.ಟಿ, ವಿಠಲ್ ಗೌಡ, ಸುಜಾತ ಭಟ್ ವಿರುದ್ಧ ಸಲ್ಲಿಸಿದ್ದರು.

ಈ ವರದಿಯ ಬಗ್ಗೆ ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶರಾದ ವಿಜಯೇಂದ್ರ.ಹೆಚ್.ಟಿ ಅವರು ವಿಚಾರಣೆ ನಡೆಸಿ ಜ.3 ರಂದು ಎಸ್.ಐ.ಟಿ ಸಲ್ಲಿಸಿದ ವರದಿಯನ್ನು ತಟಸ್ಥ ಮಾಡಿ ತನಿಖೆ ನಡೆಸಿ ಅಂತಿಮ ವರದಿಯನ್ನು ಸಲ್ಲಿಸಲು ಆದೇಶವನ್ನು ಪ್ರಕಟ ಮಾಡಿದ್ದಾರೆ. ಎಸ್ಐಟಿ ಅಧಿಕಾರಿಗಳಿಗೆ ಮುಕ್ತ ಅವಕಾಶ ನೀಡಿದೆ.

ಬೆಳ್ತಂಗಡಿ ನ್ಯಾಯಾಲಯಕ್ಕೆ ಎಸ್ಐಟಿ ಎಸ್ಪಿ ಸಿ.ಎ.ಸೈಮನ್, ಡಿವೈಎಸ್ಪಿ ಲೋಕೇಶ್ ಹಾಗೂ ಇತರ ಅಧಿಕಾರಿಗಳು ಹಾಜರಿದ್ದರು. ಎಸ್.ಐ.ಟಿ ಪರ ವಕೀಲರಾದ ದಿವ್ಯರಾಜ್ ವಾದ ಮಂಡಿಸಿದರು. ವರದಿಯ ಬಗ್ಗೆ ಮುಂದಿನ ವಿಚಾರಣೆಯನ್ನು ಜ.23 ಕ್ಕೆ‌ ಕೋರ್ಟ್ ಮುಂದೂಡಿದೆ.

- Advertisement -

Latest News

error: Content is protected !!