Thursday, June 4, 2026
Homeತಾಜಾ ಸುದ್ದಿಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದ ಬಸ್ : 14 ಮಂದಿ ಸ್ಥಳದಲ್ಲೇ ಸಾವು

ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದ ಬಸ್ : 14 ಮಂದಿ ಸ್ಥಳದಲ್ಲೇ ಸಾವು

- Advertisement -
- Advertisement -

ಕೊಲಂಬೊ : ಬಸ್ ವೊಂದು ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿ ಬಿದ್ದ ಪರಿಣಾಮ 14 ಮಂದಿ ಸಾವನ್ನಪ್ಪಿರುವ ಘಟನೆ ಶ್ರೀಲಂಕಾದ ಪಸ್ಸಾರ ಪಟ್ಟಣದಲ್ಲಿ ನಡೆದಿದೆ.

ಪಸ್ಸಾರಾ ಪಟ್ಟಣದ ಬಳಿ ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿ ಬಿದ್ದ ಪರಿಣಾಮ 13 ಮಂದಿ ಮೃತಪಟ್ಟಿದ್ದು, 30 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಬಸ್ಸಿನಲ್ಲಿ 70 ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಈ ಪೈಕಿ 13 ಮಂದಿ ಸಾವನ್ನಪ್ಪಿದ್ದಾರೆ, ಘಟನೆಯಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸ್ ವಕ್ತಾರ ಅಜಿತ್ ರೋಹನಾ ಮಾಹಿತಿ ನೀಡಿದ್ದಾರೆ.

- Advertisement -

Latest News

error: Content is protected !!