- Advertisement -
![]()
- Advertisement -
ಮಂಗಳೂರು: ರಸ್ತೆ ದಾಟುತ್ತಿದ್ದ ವೇಳೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಕಾಲೇಜ್ ವಿದ್ಯಾರ್ಥಿನಿ ಸ್ಥಳದಲ್ಲೇ ಮೃತ ಪಟ್ಟ ಘಟನೆ ನಡೆದಿದೆ. ನಗರದ ಮರಕಡ ಜಂಕ್ಷನ್‌ನಲ್ಲಿ ಇಂದು ಬೆಳಗ್ಗೆ ಈ ದುರ್ಘಟನೆ ಸಂಭವಿಸಿದೆ.
ಕಾವೂರು ಕುಂಜತ್ ಬೈಲ್ ಜ್ಯೋತಿನಗರ ನಿವಾಸಿ ಚೆಲ್ಲಯ್ಯ ಎಂಬವರ ಪುತ್ರಿ ಸಿ.ಪವಿತ್ರಾ (21) ಮೃತ ವಿದ್ಯಾರ್ಥಿನಿ.
ಈಕೆ ಬೆಳಗ್ಗೆ ಮರಕಡ ಜಂಕ್ಷನ್‌ನಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಕಿನ್ನಿಗೋಳಿ ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ನವದುರ್ಗಾ ಬಸ್ಸು ಢಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಇದರಿಂದ ಪವಿತ್ರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈಕೆ ಮಂಗಳೂರು ವಿ.ವಿಯ ಪ್ರಥಮ ಎಂ.ಕಾಂ ವಿದ್ಯಾರ್ಥಿನಿಯಾಗಿದ್ದಾಳೆ.
ಮಂಗಳೂರು ಸಂಚಾರ ಉತ್ತರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.
- Advertisement -


