Thursday, June 4, 2026
Homeಕರಾವಳಿಕಾಸರಗೋಡುಕಾಸರಗೋಡು: ;ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಅಪಘಾತ,ಡ್ರೈವರ್ ಸಾವು

ಕಾಸರಗೋಡು: ;ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಅಪಘಾತ,ಡ್ರೈವರ್ ಸಾವು

- Advertisement -
- Advertisement -

ಕಾಸರಗೋಡು: ;ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಅಪಘಾತವಾಗಿ ಡ್ರೈವರ್ ಸಾವನ್ನಪ್ಪಿರುವ ಘಟನೆ

ಕಾಸರಗೋಡಿನ  ರಾಷ್ಟ್ರೀಯ ಹೆದ್ದಾರಿಯ ಚಾಲಿಂಗಾಲ್ ನಲ್ಲಿ ಸೋಮವಾರ ಸಂಜೆ ನಡೆದಿದೆ.ಇನ್ನು 20 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ.

ಚೇತನ್ ಕುಮಾರ್ (37) ಮೃತಪಟ್ಟ ಬಸ್ ಚಾಲಕ.  ಮಂಗಳೂರಿನಿಂದ ಕಣ್ಣೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಚಾಲಿಂಗಾಲ್ ನ ಪೆರಿಯ ಗ್ರಾಮ ಪಂಚಾಯತ್ ಕಚೇರಿ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ನಡೆದಿದೆ. ರಾಷ್ಟ್ರೀಯ ಹೆದ್ದಾರಿಯ ಅಭಿವೃದ್ಧಿ ಹಿನ್ನೆಲೆಯಲ್ಲಿ ಟೋಲ್ ಬೂತ್ ನಿರ್ಮಿಸಲು ಚಾಲಿಂಗಾಲ್ ನಲ್ಲಿ ಸಂಚಾರಕ್ಕೆ ಬದಲಿ ವ್ಯವಸ್ಥೆ ಮಾಡಿದ್ದು, ಈ ರಸ್ತೆಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಬಸ್ಸಿನಡಿಯಲ್ಲಿ ಸಿಲುಕಿದವರನ್ನು ಅಗ್ನಿಶಾಮಕ ದಳದ ಸಿಬ್ಬಂದಿ, ಪೊಲೀಸರು ಸ್ಥಳೀಯರ ನೆರವಿನಲ್ಲಿ ಹೊರತೆಗೆದು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

- Advertisement -

Latest News

error: Content is protected !!