Thursday, June 4, 2026
Homeಕರಾವಳಿಬೆಳ್ತಂಗಡಿ : ನಿಡ್ಲೆಯಲ್ಲಿ ಎರಡು ಬಸ್ ನಡುವೆ ಅಪಘಾತ: ಇಬ್ಬರು ಚಾಲಕರಿಗೆ ಗಂಭೀರ ಗಾಯ

ಬೆಳ್ತಂಗಡಿ : ನಿಡ್ಲೆಯಲ್ಲಿ ಎರಡು ಬಸ್ ನಡುವೆ ಅಪಘಾತ: ಇಬ್ಬರು ಚಾಲಕರಿಗೆ ಗಂಭೀರ ಗಾಯ

- Advertisement -
- Advertisement -

ಬೆಳ್ತಂಗಡಿ : ಎರಡು ಬಸ್ ನಡುವೆ ಅಪಘಾತ ನಡೆದಿದ್ದು ಹಲವಾರು ಮಂದಿಗೆ ಗಾಯವಾಗಿರುವ ಘಟಬೆ ನಿಡ್ಲೆಯಲ್ಲಿ ನಡೆದಿದೆ.ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮದ ಬೂಡುಜಾಲು ಸಮೀಪ ಮಕ್ಕಳ ಪ್ರವಾಸದ ಬಸ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಡಿಕ್ಕಿ ಹೊಡೆದು ಹಲವತು ಗಾಯಗೊಂಡ ಘಟನೆ ಮಂಗಳವಾರ ಮಧ್ಯಾಹ್ನ  ಸಂಭವಿಸಿದೆ.

ಸಿಂಧನೂರಿನ ಶಾಲಾ ಮಕ್ಕಳ ಪ್ರವಾಸದ ಬಸ್ ಹಾಗೂ ಸುಬ್ರಹ್ಮಣ್ಯದಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಸರಕಾರಿ ಬಸ್ ನಡುವೆ ಡಿಕ್ಕಿ ಹೊಡೆದಿದೆ. ಹೊಡೆತದ ರಭಸಕ್ಕೆ ಎರಡೂ ಬಸ್ಸಿನ ಚಾಲಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ವಾಹನದಲ್ಲಿದ್ದ ಮಕ್ಕಳು ಹಾಗೂ ಪ್ರಯಾಣಿಕರು ಗಾಯಗೊಂಡಿದ್ದು ಗಾಯಾಳುಗಳನ್ನು ನೆಲ್ಯಾಡಿ ,ಪುತ್ತೂರು, ಉಜಿರೆ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!