- Advertisement -
- Advertisement -
ಚಿಕ್ಕಮಗಳೂರು; ಚಾಲಕನ ನಿಯಂತ್ರಣ ತಪ್ಪಿ ಶಾಲಾ ಮಕ್ಕಳ ಮೇಲೆ ಖಾಸಗಿ ಬಸ್ ಹರಿದ ಪರಿಣಾಮ ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿ ಮತ್ತೋರ್ವ ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ದುಗ್ಲಾಪುರ ಗ್ರಾಮದಲ್ಲಿ ನಡೆದಿದೆ.

ತರೀಕೆರೆಯಿಂದ ಲಿಂಗದಹಳ್ಳಿಗೆ ಕಡೆಗೆ ವೇಗವಾಗಿ ಬಂದ ಖಾಸಗಿ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡ ಪರಿಣಾಮ ಈ ಘಟನೆ ನಡೆದಿದೆ. ಘಟನೆಯಲ್ಲಿ ಇಬ್ಬರು ವಿದ್ಯಾರ್ಥಿನಿಯರು ಗಂಭೀರ ಗಾಯಗೊಂಡಿದ್ದರು .ಅವರಲ್ಲಿ ತುಳಸಿ ಎಂಬ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾಳೆ. ಬಾವಿಕೆರೆ ಸರ್ಕಾರಿ ಪ್ರೌಢಶಾಲೆಯಲ್ಲಿ 9ನೇ ತರಗತಿಯಲ್ಲಿ ಓದುತ್ತಿದ್ದಳು. ತರೀಕರೆ ತಾಲೂಕಿನ ಸೀತಾಪುರ ಕಾವಲಿನ ಮಂಜು-ಲತಾ ದಂಪತಿಯ ಪುತ್ರಿ ತುಳಸಿ.
ಇಂದು ಬೆಳಗ್ಗೆ ಕೆಲವು ವಿದ್ಯಾರ್ಥಿಗಳು ಶಾಲೆಗೆ ತೆರಳಲು ಬಸ್ಸಿಗಾಗಿ ಕಾಯುತ್ತಿದ್ದಾಗ ಘಟನೆ ನಡೆದಿದೆ ಎನ್ನಲಾಗಿದೆ. ಇನ್ನು ವೇಗದ ಚಾಲನೆಯೇ ದುರ್ಘಟನೆಗೆ ಕಾರಣ ಎಂದು ಆರೋಪಿಸಲಾಗಿದೆ.
- Advertisement -