ಹಾಸನ: ಬೆಂಗಳೂರಿನಿಂದ ಸುಬ್ರಮಣ್ಯಕ್ಕೆ ಬರುತ್ತಿದ್ದ ಖಾಸಗಿ ಬಸ್ ನಡು ರಸ್ತೆಯಲ್ಲಿಯೇ ಹತ್ತಿ ಹೊರಿದ ಘಟನೆ ಸಕಲೇಶಪುರ ತಾಲೂಕಿನ, ಶಿರಾಡಿಘಾಟ್ ರಸ್ತೆಯ, ಎತ್ತಿನಹಳ್ಳ ಬಳಿ ಗುರುವಾರ ಮುಂಜಾನೆ ನಡೆದಿದೆ.ಚಾಲಕನ ಸಮಯ ಪ್ರಜ್ಞೆ ಬಸ್ಸಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
ಬೆಂಗಳೂರಿನಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕುಕ್ಕೆ ಶ್ರೀ ಹೆಸರಿನ ಕ್ಲೀಪಿಂಗ್ ಕೋಚ್ ಎಸಿ ಬಸ್ ನಲ್ಲಿ ಸುಮಾರು 30 ಪ್ರಯಾಣಿಕರಿದ್ದರು. ಬಸ್ ಶಿರಾಡಿ ಘಾಟ್ ರಸ್ತೆಯಲ್ಲಿ ತೆರಳುತ್ತಿದ್ದ ವೇಳೆ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗಿಸಿದ ಚಾಲಕ ಯೋಗೀಶ್ ಎಲ್ಲರ ಪ್ರಾಣ ಉಳಿಸಿದ್ದಾರೆ.
ನೋಡ ನೋಡುತ್ತಿದ್ದಂತೆ ಬಸ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ತೆರಳಿ ಬೆಂಕಿ ನಂದಿಸುವ ಪ್ರಯತ್ನ ಮಾಡಿದರು. ಅಷ್ಟರಲ್ಲಿ ಬಸ್ ಸಂಪೂರ್ಣ ಸುಟ್ಟು ಹೋಗಿತ್ತು. ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಎಲ್ಲರನ್ನೂ ಬದಲಿ ಬಸ್ ಗಳಲ್ಲಿ ಕಳುಹಿಸಲಾಗಿದೆ.


