Thursday, June 4, 2026
Homeಕರಾವಳಿಮಂಗಳೂರುಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸಿನ ಟೈಯರ್ ಸ್ಫೋಟ; ಇಡೀ ಬಸ್ ಬೆಂಕಿಗಾಹುತಿ

ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸಿನ ಟೈಯರ್ ಸ್ಫೋಟ; ಇಡೀ ಬಸ್ ಬೆಂಕಿಗಾಹುತಿ

- Advertisement -
- Advertisement -

ಹಾಸನ: ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸಿನ ಟೈಯರ್ ಸ್ಫೋಟವಾಗಿ ಪ್ರಯಾಣಿಕರ ವಸ್ತುಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ಹಾಸನದ ಶಾಂತಿಗ್ರಾಮ ಸಮೀಪ ಶುಕ್ರವಾರ ತಡರಾತ್ರಿ ನಡೆದಿದೆ. ಚಾಲಕನ ಸಮಯಪ್ರಜ್ಞೆಯಿಂದ ಬಸ್ಸಿನಲ್ಲಿದ್ದ 36 ಮಂದಿ ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.


ಮಂಗಳೂರಿನಿಂದ ಬೆಂಗಳೂರಿನತ್ತ ಸಂಚರಿಸುತ್ತಿದ್ದ ಖಾಸಗಿ ಬಸ್ಸಿನ ಟೈಯರ್ ಸ್ಫೋಟಗೊಂಡ ಪರಿಣಾಮ ಮೊದಲು ಹೊಗೆ ಕಾಣಿಸಿಕೊಂಡಿದೆ. ಬಳಿಕ ಭಾರೀ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿತೆನ್ನಲಾಗಿದೆ. ಪರಿಸ್ಥಿತಿಯನ್ನು ಗಮನಿಸಿದ ಚಾಲಕ ತಕ್ಷಣ ಬಸ್ಸನ್ನು ರಸ್ತೆ ಬದಿಗೆ ನಿಲ್ಲಿಸಿ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸದಿದ್ದರೂ, ಕೆಲ ಪ್ರಯಾಣಿಕರ ಮೊಬೈಲ್ ಫೋನ್, ಲಗೇಜ್ ಹಾಗೂ ಇತರೆ ವಸ್ತುಗಳು ಬೆಂಕಿಗಾಹುತಿಯಾಗಿವೆ .

ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಭೇಟಿ ನೀಡಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿ ಪರಿಶೀಲನೆ ನಡೆಸಿದರು.

Share this:

- Advertisement -

Latest News

error: Content is protected !!