Sunday, June 7, 2026
Homeತಾಜಾ ಸುದ್ದಿಸಚಿವ ಕೋಟ ಶ್ರೀನಿವಾಸ ಪೂಜಾರಿ ಸಂಚರಿಸುತ್ತಿದ್ದ ಕಾರಿಗೆ KSRTC ಬಸ್ ಢಿಕ್ಕಿ

ಸಚಿವ ಕೋಟ ಶ್ರೀನಿವಾಸ ಪೂಜಾರಿ ಸಂಚರಿಸುತ್ತಿದ್ದ ಕಾರಿಗೆ KSRTC ಬಸ್ ಢಿಕ್ಕಿ

- Advertisement -
- Advertisement -

ಬೆಂಗಳೂರು: ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರಯಾಣಿಸುತ್ತಿದ್ದ ಕಾರಿಗೆ, ಕೆಎಸ್ ಆರ್ ಟಿಸಿ ಬಸ್ ಢಿಕ್ಕಿ ಹೊಡೆದ ಘಟನೆ ಬೆಂಗಳೂರು ಹೊರವಲಯದ ನೈಸ್ ರಸ್ತೆ ಬಳಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಡೆದಿದೆ.

ಸಚಿವರು‌ ಮೈಸೂರಿನಿಂದ ಬೆಂಗಳೂರಿನತ್ತ ಹೊರಟಿದ್ದರು. ಕಾರಿಗೆ ಪೆಟ್ರೋಲ್ ಹಾಕಿಸಿಕೊಂಡು ಹಿಂದಿರುಗುತ್ತಿದ್ದಾಗ ಕೆಎಸ್ ಆರ್ ಟಿಸಿ ಬಸ್ ಢಿಕ್ಕಿ ಹೊಡೆದಿದ್ದು, ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಕಾರಿನ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಅಪಘಾತದಲ್ಲಿ ಸಚಿವರು ಪ್ರಯಾಣಿಸುತ್ತಿದ್ದ ಕಾರಿಗೆ ಭಾಗಶಃ ಹಾನಿಯಾಗಿದೆ ಎಂದು ವರದಿಯಾಗಿದೆ. ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

- Advertisement -

Latest News

error: Content is protected !!