Saturday, June 6, 2026
Homeಕರಾವಳಿಉಡುಪಿಉಡುಪಿ: ಕೊಲ್ಲೂರು ಮೂಕಾಂಬಿಕೆ ದರ್ಶನಕ್ಕಾಗಿ ಬಂದವರನ್ನು, ಗೋವಾ ಬೀಚ್ ಗೆ ಕರೆದೊಯ್ದ ಬಸ್ ಚಾಲಕ

ಉಡುಪಿ: ಕೊಲ್ಲೂರು ಮೂಕಾಂಬಿಕೆ ದರ್ಶನಕ್ಕಾಗಿ ಬಂದವರನ್ನು, ಗೋವಾ ಬೀಚ್ ಗೆ ಕರೆದೊಯ್ದ ಬಸ್ ಚಾಲಕ

- Advertisement -
- Advertisement -

ಡುಪಿ : ಕೊಲ್ಲೂರು ದೇವಸ್ಥಾನ ದರ್ಶನ ಮಾಡಲು ಹೊರಟಿದ್ದ ಯಾತ್ರಾರ್ಥಿಗಳನ್ನು ಬಸ್ ಚಾಲಕ ಗೋವಾ ಬೀಚ್ ಗೆ ಕರೆದೊಯ್ದು ವಿಚಿತ್ರ ಪ್ರಸಂಗ ನಡೆದಿದೆ.

ಮೇ 15ರ ಸಂಜೆ ತಿರುವನಂತಪುರದಿಂದ ಕೇರಳ ರಾಜ್ಯ ಸಾರಿಗೆ ಸಂಸ್ಥೆಯ ಕೆ-ಸ್ವಿಫ್ಟ್‌ ಬಸ್‌ ಕೊಲ್ಲೂರಿಗೆ ಹೊರಟಿತ್ತು. ಎರ್ನಾಕುಳಂ ವರೆಗೆ ಓರ್ವ ಚಾಲಕನಿದ್ದು, ಅಲ್ಲಿಂದ ಇನ್ನೋರ್ವ ಚಾಲಕ ಬಸ್ಸನ್ನೇರಿ ಕರ್ತವ್ಯ ಆರಂಭಿಸಿದ. ಬಸ್‌ ಮಂಗಳೂರು ಮೂಲಕ ಕುಂದಾಪುರಕ್ಕೆ ತಲುಪಿತು. ಅಲ್ಲಿಂದ ಕೊಲ್ಲೂರಿಗೆ ತೆರಳಲು ಬಲಕ್ಕೆ ತಿರುವು ಪಡೆದುಕೊಳ್ಳಬೇಕು. ಆದರೆ ಕೊಲ್ಲೂರು ಬಗೆಗೆ ಯಾವುದೇ ಮಾಹಿತಿ ಇಲ್ಲದ ಚಾಲಕ ನೇರವಾಗಿ ರಾಷ್ಟ್ರೀಯ ಹೆದ್ದಾರಿಯಲ್ಲೇ ಬಸ್ಸನ್ನು ಚಲಾಯಿಸಿದ್ದಾನೆ.

ಸೋಮವಾರ ಬೆಳಗ್ಗೆ ಬಸ್‌ನಲ್ಲಿದ್ದವರು ಎಚ್ಚೆತ್ತು ನೋಡಿದಾಗ ಬಸ್‌ ಸಮುದ್ರ ಕಿನಾರೆಯಲ್ಲಿತ್ತು. ಅರೆನಗ್ನ ವಿದೇಶೀಯರು ಓಡಾಡುತ್ತಿದ್ದರು. ಮೂಕಾಂಬಿಕೆಯ ದರ್ಶನಕ್ಕೆಂದು ಹೊರಟ ತಾವು ಗೋವಾಗೆ ತಲುಪಿದ್ದೇವೆ ಎಂಬುದು ತಿಳಿಯಿತು.ಚಾಲಕನೊಂದಿಗೆ ಪ್ರಯಾಣಿಕರು ವಾಗ್ವಾದ ನಡೆಸಿದರು. ಗೂಗಲ್‌ ಮ್ಯಾಪ್‌ ದಾರಿ ತಪ್ಪಿಸಿದೆ ಎಂದು ಹೇಳಿ ಚಾಲಕ ಪಾರಾಗಲು ಯತ್ನಿಸಿದ. ಬಳಿಕ ಪ್ರಯಾಣಿಕರನ್ನು ಕೊಲ್ಲೂರಿಗೆ ಕರೆದೊಯ್ಯಿದ್ದಾನೆ. ದೇವರ ದರ್ಶನ ಪಡೆದ ಪ್ರಯಾಣಿಕರು ಊರಿಗೆ ವಾಪಸಾಗಿದ್ದಾರೆ.

- Advertisement -

Latest News

error: Content is protected !!