Friday, June 5, 2026
Homeಕರಾವಳಿನೆಲ್ಯಾಡಿ: ನದಿಗೆ ಬಿದ್ದ ಖಾಸಗಿ ಬಸ್‌, ಡ್ರೈವರ್‌ ಸ್ಥಳದಲ್ಲೇ ಸಾವು

ನೆಲ್ಯಾಡಿ: ನದಿಗೆ ಬಿದ್ದ ಖಾಸಗಿ ಬಸ್‌, ಡ್ರೈವರ್‌ ಸ್ಥಳದಲ್ಲೇ ಸಾವು

- Advertisement -
- Advertisement -

ನೆಲ್ಯಾಡಿ: ಬೆಂಗಳೂರು ಮೂಲದ ಖಾಸಗಿ ಸ್ಲೀಪರ್‌ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ನಡೆದಿದೆ.

ಶುಕ್ರವಾರ ತಡರಾತ್ರಿ 11 ಗಂಟೆಗೆ ಈ ದುರ್ಘಟನೆ ಸಂಭವಿಸಿದ್ದು, ಗುದ್ದಿದ ರಭಸಕ್ಕೆ ಬಸ್‌ನ ಡ್ರೈವರ್‌ ಬಸ್‌ನ ಅಡಿಗೆ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೃತರು ಬೆಂಗಳೂರು ಮೂಲದವರೆಂದು ತಿಳಿದುಬಂದಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಷ್ಟೇ.

ಈ ಖಾಸಗಿ ಸ್ಲೀಪರ್‌ ಬಸ್‌ ಗುರುವಾರ ಬೆಂಗಳೂರಿನಿಂದ ಪ್ರಯಾಣಿಕರನ್ನು ಗೋಕರ್ಣದಲ್ಲಿ ಇಳಿಸಿ, ನಿನ್ನೆ ಕುಕ್ಕೆ ಸುಬ್ರಹ್ಮಣ್ಯದಿಂದ ಬೆಂಗಳೂರಿಗೆ ಪ್ರಯಾಣಿಕರನ್ನು ಪಿಕ್‌-ಅಪ್‌ ಮಾಡಲು ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಗೋಕರ್ಣದಿಂದ ಡ್ರೈವರ್‌ ಮತ್ತು ಸಹ-ಡ್ರೈವರ್‌ ಮಾತ್ರ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದು, ಯಾವುದೇ ಪ್ರಯಾಣಿಕರು ಇಲ್ಲದ ಕಾರಣ ಹೆಚ್ಚಿನ ಸಾವು ನೋವು ಸಂಭವಿಸಿಲ್ಲ.

- Advertisement -

Latest News

error: Content is protected !!