Friday, June 5, 2026
Homeಕರಾವಳಿನಾಳೆಯಿಂದ ಜಿಲ್ಲೆಯಲ್ಲಿ ಬೆಳಗ್ಗೆ 7 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಬಸ್ ಓಡಾಟಕ್ಕೆ ಅನುಮತಿ: 18...

ನಾಳೆಯಿಂದ ಜಿಲ್ಲೆಯಲ್ಲಿ ಬೆಳಗ್ಗೆ 7 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಬಸ್ ಓಡಾಟಕ್ಕೆ ಅನುಮತಿ: 18 ವರ್ಷಕ್ಕಿಂತ ಕೆಳಗಿನವರಿಗೆ ಅಂಗಡಿಗೆ ನೋ ಎಂಟ್ರಿ

- Advertisement -
- Advertisement -

ಮಂಗಳೂರು:  ನಾಳೆ ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಬಸ್ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಆದರೆ ಬಸ್ ಗಳಲ್ಲಿ ನಿಂತುಕೊಂಡು ಪ್ರಯಾಣಿಸುವುದಕ್ಕೆ ಅವಕಾಶವಿಲ್ಲ. ಆಸನದ ಸಾಮರ್ಥ್ಯದ 50 ರಷ್ಟು ಪ್ರಯಾಣಿಕರು ಮಾತ್ರ ಪ್ರಯಾಣಿಸುವುದಕ್ಕೆ ಅನುಮತಿ ನೀಡಲಾಗಿದೆ. ಅಲ್ಲದೇ ಹೊರ ಜಿಲ್ಲೆಗಳಿಗೆ ಪ್ರಯಾಣಿಸಲು ಬಸ್ ಸೇವೆಗಳನ್ನು ಆರಂಭಿಸಲು ಅನುಮತಿ ನೀಡಲಾಗಿದೆ.

ಅಲ್ಲದೇ ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರುವ ಸಂದರ್ಭದಲ್ಲಿ ಜಿಲ್ಲಾ ವ್ಯಾಪ್ತಿಯಲ್ಲಿ ಬಸ್ ಸಂಚಾರಕ್ಕೂ ನಿರ್ಬಂಧವನ್ನು ಹೇರಲಾಗಿದೆ. ತುರ್ತು ಸೇವೆಗಳನ್ನು ಹೊರತು ಪಡಿಸಿ ಉಳಿದ ಯಾವುದೇ ರೀತಿಯ ವಾಹನ ಸಂಚಾರಕ್ಕೂ ಅವಕಾಶವಿರುವುದಿಲ್ಲ ಎಂದು ಜಿಲ್ಲಾಡಳಿತ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.ಅಲ್ಲದೇ ಅಂಗಡಿ ಅಥವಾ ಇನ್ನಿತರ ವಾಣಿಜ್ಯ ಉದ್ದೇಶಗಳಿಗೆ 18 ವರ್ಷಕ್ಕಿಂತ ಕೆಳಗಿನವರನ್ನು ಕರೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ

- Advertisement -

Latest News

error: Content is protected !!