- Advertisement -
![]()
- Advertisement -
ಮಂಗಳೂರು; ಕೇರಳ ಮೂಲದ ಉದ್ಯಮಿಯನ್ನು ಅಪಹರಿಸಿ ದುಷ್ಕರ್ಮಿಗಳು ಹಣಕ್ಕಾಗಿ ಬೇಡಿಕೆ ಇಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಶರತ್ ಎಂಬವರು ಮಂಗಳೂರಿನ ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಸೀಟು ಮಾಡಿಕೊಡಲು ಕೇರಳದಿಂದ ಬಂದಿದ್ದರು. ತನ್ನ ಕೆಲಸ ಮುಗಿಸಿ ಶರತ್ ಬೆಂಗಳೂರಿಗೆ ತೆರಳಲು ಮಂಗಳವಾರ ರಾತ್ರಿ ನಗರ ಪಿವಿಎಸ್ ಬಳಿ ಬಸ್ ಕಾಯುತ್ತಿದ್ದರು. ಈ ವೇಳೆ ಕಾರಿನಲ್ಲಿ ಬಂದ ನಾಲ್ವರ ತಂಡ ಶರತ್ ಅವರನ್ನು ಬಲವಂತವಾಗಿ ಕಾರಿಗೆ ಹಾಕಿ ಅಪಹರಿಸಿದ್ದಾರೆ. ಬಳಿಕ ಆತನ ಮನೆಯವರಿಗೆ ಫೋನ್ ಮಾಡಿ 10 ಲಕ್ಷ ರೂಪಾಯಿಗಳಿಗೆ ಬೇಡಿಕೆ ಇಟ್ಟಿದ್ದಾರೆ.10 ಲಕ್ಷ ಕೊಟ್ಟರೆ ಆತನನ್ನು ಬಿಡುಗಡೆ ಮಾಡುವುದಾಗಿ ಅವಾಜ್ ಬೆದರಿಸಿದ್ದಾರೆ ಎನ್ನಲಾಗಿದೆ.
ಶರತ್ ಅವರ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿದೆ ಎನ್ನಲಾಗಿದ್ದು ಈ ಬಗ್ಗೆ ಕದ್ರಿ ಪೊಲೀಸರು ಪ್ರಕರಣ ದಾಖಲು ಮಾಡಿ ಸಿಸಿ ಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸುತ್ತಿದ್ದು ತನಿಖೆ ಕೈಗೊಂಡಿದ್ದಾರೆ.
- Advertisement -


