Wednesday, June 24, 2026
Homeಕರಾವಳಿಉಡುಪಿಉದ್ಯಮಿಗೆ ಫ್ಲ್ಯಾಟ್, ಚಿನ್ನದ ವ್ಯವಹಾರ ಹೆಸರಲ್ಲಿ ಕೋಟ್ಯಂತರ ರೂಪಾಯಿ ವಂಚನೆ;  ಉಡುಪಿ ಮೂಲದ ದಂಪತಿ ವಿರುದ್ಧ...

ಉದ್ಯಮಿಗೆ ಫ್ಲ್ಯಾಟ್, ಚಿನ್ನದ ವ್ಯವಹಾರ ಹೆಸರಲ್ಲಿ ಕೋಟ್ಯಂತರ ರೂಪಾಯಿ ವಂಚನೆ;  ಉಡುಪಿ ಮೂಲದ ದಂಪತಿ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಉಡುಪಿ: ಉದ್ಯಮಿಗೆ ಫ್ಲ್ಯಾಟ್, ಚಿನ್ನದ ವ್ಯವಹಾರ ಹೆಸರಲ್ಲಿ ಕೋಟ್ಯಂತರ ರೂಪಾಯಿ ವಂಚನೆ ಮಾಡಿರುವ ಆರೋಪದಡಿ  ಉಡುಪಿ ಮೂಲದ ದಂಪತಿ ವಿರುದ್ಧ ಪ್ರಕರಣ ದಾಖಲಾಗಿದೆ. ಉಡುಪಿಯ ಸುಹಾಸಿನಿ ಶೆಟ್ಟಿ ಹಾಗೂ ಅವರ ಪತಿ ಪುನೀತ್ ಶೆಟ್ಟಿ ವಿರುದ್ಧ  ಮುಂಬೈ ಮೂಲದ ಉದ್ಯಮಿ ಮಮತಾ ಶೆಟ್ಟಿ ದೂರು ನೀಡಿದ್ದಾರೆ.

ಪ್ರಕರಣದ ವಿವರ: ಹರಾಜಿನಲ್ಲಿ ಫ್ಲ್ಯಾಟ್ ಮತ್ತು ಚಿನ್ನ ಖರೀದಿಸಿ ಕೊಡುವುದಾಗಿ ನಂಬಿಸಿ ಮುಂಬೈ ಮೂಲದ ಉದ್ಯಮಿ ಮಮತಾ ಶೆಟ್ಟಿಗೆ ಅವರ ದೂರದ ಸಂಬಂಧಿಯಾಗಿರುವ ಸುಹಾಸಿನಿ, 2024ರ ಜನವರಿಯಿಂದ ಜೂನ್‌ವರೆಗೆ ಹಂತ ಹಂತವಾಗಿ 4.78 ಕೋಟಿ ರೂ. ಹಣ ವರ್ಗಾಯಿಸಿಕೊಂಡು ವಂಚಿಸಿದ್ದಾರೆ ಎಂದು  ದೂರಿನಲ್ಲಿ ತಿಳಿಸಲಾಗಿದೆ.

ಈ ಬಗ್ಗೆ 2024ರಲ್ಲಿ ಉಡುಪಿ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಸುಹಾಸಿನಿ ಶೆಟ್ಟಿ ನ್ಯಾಯಾಲಯದಿಂದ ಪ್ರಕರಣಕ್ಕೆ ಸ್ಟೇ ಆದೇಶ ಪಡೆದಿದ್ದರು ಎನ್ನಲಾಗಿದೆ. ನಂತರ ಕಿಶೋರ್ ಶೆಟ್ಟಿ ಮತ್ತು ನವೀನ್ ಮೂಲ್ಕಿ ಎನ್ನುವವರ ಮೂಲಕ ಸಂಧಾನ ಮಾತುಕತೆ ನಡೆದಿದ್ದರೂ ಅದು ವಿಫಲವಾಗಿದೆ. ಇದೀಗ ಸುಹಾಸಿನಿ ಮತ್ತು ಪತಿ ಮಣಿಪಾಲದಿಂದ ಮಂಗಳೂರಿಗೆ ಸ್ಥಳಾಂತರಗೊಂಡ ಹಿನ್ನೆಲೆ, ಮಮತಾ ಶೆಟ್ಟಿ ಮಂಗಳೂರು ಪೊಲೀಸ್ ಆಯುಕ್ತರನ್ನು ಸಂಪರ್ಕಿಸಿ ಮರು ತನಿಖೆಗೆ ಮನವಿ ಮಾಡಿದ್ದಾರೆ. ಪ್ರಕರಣವನ್ನು ಮರು ಪರಿಶೀಲಿಸುವುದಾಗಿ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಭರವಸೆ ನೀಡಿದ್ದಾರೆ.

- Advertisement -

Latest News

error: Content is protected !!