Friday, June 5, 2026
Homeಕರಾವಳಿಮಂಗಳೂರುಮಂಗಳೂರು: ಉದ್ಯಮಿಗೆ ಚೂರಿಯಿಂದ ಇರಿದು ಮನೆ ದರೋಡೆ

ಮಂಗಳೂರು: ಉದ್ಯಮಿಗೆ ಚೂರಿಯಿಂದ ಇರಿದು ಮನೆ ದರೋಡೆ

- Advertisement -
- Advertisement -

ಮಂಗಳೂರು: ಉದ್ಯಮಿಗೆ ಚಾಕುವಿನಿಂದ ಇರಿದು ಮನೆ ದರೋಡೆಗೈದಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಮಂಗಳೂರು ಹೊರವಲಯದ ಪೆರ್ಮಂಕಿ ಎಂಬಲ್ಲಿ ಉದ್ಯಮಿ ಪದ್ಮನಾಭ ಕೋಟ್ಯಾನ್ ಎಂಬವರ ಮನೆಯಲ್ಲಿ ದರೋಡೆ ನಡೆದಿದೆ.

ಸಿವಿಲ್ ಕಾಂಟ್ರಾಕ್ಟರ್ ಆಗಿರುವ ಪದ್ಮನಾಭ ಕೋಟ್ಯಾನ್ ನಿವಾಸಕ್ಕೆ
ಇನ್ನೋವಾ ಕಾರಿನಲ್ಲಿ ಬಂದಿದ್ದ ಎಂಟು ದುಷ್ಕರ್ಮಿಗಳು ಮನೆಯ ಸದಸ್ಯರನ್ನು ಚೂರಿ ತೋರಿಸಿ ಬೆದರಿಸಿ ದರೋಡೆ ಮಾಡಿ ಪರಾರಿಯಾಗಿದ್ದಾರೆ.

ಉದ್ಯಮಿ ಪದ್ಮನಾಭ ಅವರ ಭುಜಕ್ಕೆ ಚೂರಿಯಿಂದ ಇರಿದಿರುವ ದರೋಡೆಕೋರರು, ಪತ್ನಿಯನ್ನು ಕಟ್ಟಿಹಾಕಿ ಮನೆಯಲ್ಲಿದ್ದ
ನಗದು ಸೇರಿದಂತೆ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.

ಚೂರಿ ಇರಿತದಿಂದ ಗಾಯಗೊಂಡಿರುವ ಉದ್ಯಮಿ ಪದ್ಮನಾಭ ಕೋಟ್ಯಾನ್ ಆಸ್ಪತ್ರೆಗೆ ದಾಖಲಾಗಿದ್ದು, ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!