Monday, June 8, 2026
Homeಕರಾವಳಿಉಡುಪಿದಕ್ಷಿಣ ಕನ್ನಡ ಜಿಲ್ಲೆಯ 3, ಉಡುಪಿ ಜಿಲ್ಲೆಯ ಒಂದು ಗ್ರಾ.ಪಂ. ಸ್ಥಾನಗಳಿಗೆ ಉಪ ಚುನಾವಣೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯ 3, ಉಡುಪಿ ಜಿಲ್ಲೆಯ ಒಂದು ಗ್ರಾ.ಪಂ. ಸ್ಥಾನಗಳಿಗೆ ಉಪ ಚುನಾವಣೆ ಘೋಷಣೆ

- Advertisement -
- Advertisement -

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಗ್ರಾಮ ಪಂಚಾಯತ್ ಗಳಲ್ಲಿ ತೆರವಾಗಿರುವ 201 ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ.‌

ರಾಜ್ಯ ಚುನಾವಣಾ ಆಯೋಗದಿಂದ ಚುನಾವಣೆ ಘೋಷಣೆಯಾಗಿದ್ದು,ಮೇ 20 ರಂದು ಮತದಾನ ನಡೆಯಲಿದೆ.

ಈ ಪೈಕಿ ದಕ್ಷಿಣ ಕನ್ನಡ ಜಿಲ್ಲೆಯ 3 ಮತ್ತು ಉಡುಪಿ ಜಿಲ್ಲೆಯ 1 ಗ್ರಾಮ ಪಂಚಾಯತ್ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.

ಮಂಗಳೂರು ತಾಲೂಕಿನ ಮುಚ್ಚೂರು ಗ್ರಾಮ ಪಂಚಾಯತ್, ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮ ಪಂಚಾಯತ್, ಪುತ್ತೂರು ತಾಲೂಕಿನ ಬಲ್ನಾಡು ಗ್ರಾಮ ಪಂಚಾಯತ್ ಮತ್ತು ಉಡುಪಿ ತಾಲೂಕಿನ ಅಲೆವೂರು ಗ್ರಾಮ ಪಂಚಾಯತ್ ಗಳ ತಲಾ ಒಂದು ಸ್ಥಾನಗಳಿಗೆ ಉಪ ಚುನಾವಣೆ ನಿಗದಿಯಾಗಿದೆ.

ಮೇ 5 ರಂದು ಚುನಾವಣಾ ಅಧಿಸೂಚನೆ ಪ್ರಕಟವಾಗಲಿದ್ದು, ಮೇ 10 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ.

ಮೇ 22 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

- Advertisement -

Latest News

error: Content is protected !!