Saturday, June 13, 2026
HomeUncategorizedವಿಧಾನ ಪರಿಷತ್ ಮೂರು ಸ್ಥಾನಗಳಿಗೆ ಉಪಚುನಾವಣೆ ಘೋಷಣೆ

ವಿಧಾನ ಪರಿಷತ್ ಮೂರು ಸ್ಥಾನಗಳಿಗೆ ಉಪಚುನಾವಣೆ ಘೋಷಣೆ

- Advertisement -
- Advertisement -

ಬೆಂಗಳೂರು: ವಿಧಾನ ಪರಿಷತ್ ನಲ್ಲಿ ತೆರವಾಗಿರುವ ಮೂರು ಸ್ಥಾನಗಳಿಗೆ ಉಪ ಚುನಾವಣೆ ಘೋಷಣೆಯಾಗಿದೆ.ವಿಧಾನಸಭೆಯಿಂದ ವಿಧಾನ ಪರಿಷತ್ ಗೆ ನಡೆಯಲಿರುವ ಉಪ ಚುನಾವಣೆಗೆ ಇಂದು ಕೇಂದ್ರ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ.

ಜೂನ್ 13 ರಂದು ಚುನಾವಣಾ ಅಧಿಸೂಚನೆ ಪ್ರಕಟವಾಗಲಿದ್ದು, ಜೂನ್ 20 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಜೂನ್ 30 ಚುನಾವಣೆ ಮತ್ತು ಮತ ಎಣಿಕೆ ನಡೆಯಲಿದ್ದು, ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ.

ವಿಧಾನಸಭೆ ಚುನಾವಣೆಗೆ ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಬಾಬು ರಾವ್ ಚಿಂಚನಸೂರ್, ಆರ್. ಶಂಕರ್ ಮತ್ತು ಲಕ್ಷ್ಮಣ ಸವದಿ ರಾಜೀನಾಮೆ ನೀಡಿದ್ದ ಕಾರಣ ಮೂರು ಸ್ಥಾನಗಳು ತೆರವಾಗಿದ್ದವು.

- Advertisement -

Latest News

error: Content is protected !!