Sunday, May 5, 2024
Homeಕರಾವಳಿಸುಬ್ರಹ್ಮಣ್ಯ ಗ್ರಾಮ ಪಂಚಾಯತ್‌ನ ಒಂದು ಸ್ಥಾನಕ್ಕೆ ಉಪ ಚುನಾವಣೆ; ಬಿಜೆಪಿ ಬೆಂಬಲಿತ ಅಭ್ಯರ್ಥಿಗೆ ಜಯ

ಸುಬ್ರಹ್ಮಣ್ಯ ಗ್ರಾಮ ಪಂಚಾಯತ್‌ನ ಒಂದು ಸ್ಥಾನಕ್ಕೆ ಉಪ ಚುನಾವಣೆ; ಬಿಜೆಪಿ ಬೆಂಬಲಿತ ಅಭ್ಯರ್ಥಿಗೆ ಜಯ

spot_img
- Advertisement -
- Advertisement -

ಸುಬ್ರಹ್ಮಣ್ಯ ಗ್ರಾಮ ಪಂಚಾಯತ್‌ನ ಒಂದು ಸ್ಥಾನಕ್ಕೆ ನಡೆದ ಉಪಚುನಾವಣೆಯ ಮತ ಎಣಿಕೆ ಕಾರ್ಯ ಇಂದು ಕಡಬ ತಾಲೂಕು ಕಚೇರಿಯಲ್ಲಿ ನಡೆಯಿತು. ಇದರಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ರಾಜೇಶ್ ಎನ್.ಎಸ್. 69 ಮತಗಳಿಂದ ಜಯ ಗಳಿಸಿದ್ದಾರೆ.

ಈ ಬಾರಿ ಉಪಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ರಾಜೇಶ್ ಎನ್.ಎಸ್. ಹಾಗೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಸುಬ್ರಹ್ಮಣ್ಯ ರಾವ್ ಕಣದಲ್ಲಿದ್ದರು. ಚುನಾವಣೆಯಲ್ಲಿ ರಾಜೇಶ್ 276 ಮತಗಳನ್ನು, ಸುಬ್ರಹ್ಮಣ್ಯ ರಾವ್ 207 ಮತಗಳನ್ನು ಪಡೆದಿದ್ದಾರೆ. ರಾಜೇಶ್ ಗೆಲುವು ಸಾಧಿಸಿದ್ದಾರೆ. ಇನ್ನು 8 ಅಸಿಂಧು ಮತಗಳಾಗಿದ್ದವು.

- Advertisement -
spot_img

Latest News

error: Content is protected !!