Thursday, June 4, 2026
Homeಕರಾವಳಿಉಡುಪಿಉಡುಪಿ:ಕಾಂಗ್ರೆಸ್ ಸೇರ್ಪಡೆಯಾದ ಬೈಂದೂರು ಬಿಜೆಪಿ ಟಿಕೆಟ್ ಆಕಾಂಕ್ಷಿ ಬಾಬು ಹೆಗ್ಡೆ!

ಉಡುಪಿ:ಕಾಂಗ್ರೆಸ್ ಸೇರ್ಪಡೆಯಾದ ಬೈಂದೂರು ಬಿಜೆಪಿ ಟಿಕೆಟ್ ಆಕಾಂಕ್ಷಿ ಬಾಬು ಹೆಗ್ಡೆ!

- Advertisement -
- Advertisement -

ಉಡುಪಿ:: ಬೈಂದೂರಿನಲ್ಲಿ ಬೃಹತ್ ಕಾಂಗ್ರೆಸ್ ಸಮಾವೇಶ ನಡೆಯಿತು. ಸಮಾವೇಶದಲ್ಲಿ ಭಾಗವಹಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬೈಂದೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೋಪಾಲ ಪೂಜಾರಿ ಪರ ಚುನಾವಣಾ ಪ್ರಚಾರ ನಡೆಸಿದರು.

ಇದೇ ವೇಳೆ ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಬಾಬು ಹೆಗ್ಡೆ ಸಮಾವೇಶದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು.ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾಗಿರುವ ಬಾಬು ಹೆಗ್ಡೆ ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಪ್ರಬಲ ಆಕಾಂಕ್ಷಿಯಾಗಿದ್ದರು.

ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಬಿಜೆಪಿ ಮುಖಂಡ ಬಿ.ಎನ್ ಶಂಕರ ಪೂಜಾರಿ, ವೆಂಕಟ ಪೂಜಾರಿ ಮತ್ತಿತರರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.ಈ ಮಧ್ಯೆ ಸಮಾವೇಶದಲ್ಲಿ ಹಲವು ಕಾರ್ಯಕರ್ತರು ಕೇಸರಿ ಶಾಲಿನೊಂದಿಗೆ ಭಾಗವಹಿಸಿದ್ದರು.

- Advertisement -

Latest News

error: Content is protected !!