Wednesday, June 24, 2026
Homeಅಪರಾಧಬೈಂದೂರಿನ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ಸ್ನೇಹಿತರಿಗೆ ಪಿಸ್ತೂಲ್‌ ತೋರಿಸಿ ಬೆದರಿಕೆ ಪ್ರಕರಣ: ಐವರು ಆರೋಪಿಗಳಿಗೆ...

ಬೈಂದೂರಿನ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ಸ್ನೇಹಿತರಿಗೆ ಪಿಸ್ತೂಲ್‌ ತೋರಿಸಿ ಬೆದರಿಕೆ ಪ್ರಕರಣ: ಐವರು ಆರೋಪಿಗಳಿಗೆ ಜಾಮೀನು

- Advertisement -
- Advertisement -

ಬೈಂದೂರು: ಇಲ್ಲಿನ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಅರವಿಂದ ಪೂಜಾರಿ ಹಾಗೂ ಸ್ನೇಹಿತರಿಗೆ ಅ. 18ರಂದು ಗುಂಪೊಂದು ಮಾರಕಾಯುಧಗಳಿಂದ ಹಲ್ಲೆ ನಡೆಸಿ, ಪಿಸ್ತೂಲ್‌ ತೋರಿಸಿ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳಿಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಜಾಮೀನು ನೀಡಿದೆ.

ಪ್ರಕರಣದ ವಿವರ: ಅ. 18ರ ರಾತ್ರಿಯ ಸಮಯದಲ್ಲಿ ಹಡವು ಗ್ರಾಮದ ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ತೆರಳುವ ಕ್ರಾಸ್‌ ಬಳಿ ಬೈಂದೂರು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಅರವಿಂದ ಪೂಜಾರಿ ಹಾಗೂ ಸ್ನೇಹಿತರಿಗೆ ಗುಂಪು ಕಟ್ಟಿಕೊಂಡು ಬಂದಂತಹ ಯುವಕರ ತಂಡ  ಮಾರಕಾಯುಧಗಳಿಂದ ಹಲ್ಲೆ ನಡೆಸಿ, ಪಿಸ್ತೂಲ್‌ ತೋರಿಸಿ ಬೆದರಿಕೆ ಹಾಕಿದ್ದರು.

ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಬೈಂದೂರು ಆಲೂರಿನ ಸಚಿನ್‌ ಪೂಜಾರಿ ಜಾಮೀನು ತಿರಸ್ಕೃತಗೊಂಡಿದ್ದು, ಶರತ್‌ ದೇವಾಡಿಗ, ಪ್ರಸಾದ್‌ ಆಚಾರ್ಯ, ವಿಶ್ವನಾಥ ಪಡುಕೋಣೆ, ಪ್ರದೀಪ್‌ ಪಡುಕೋಣೆ, ಪ್ರವೀಣ್‌ ಅವರಿಗೆ ಜಾಮೀನು ಮಂಜೂರಾಗಿದೆ. ಆರೋಪಿಗಳ ಪರ ನ್ಯಾಯವಾದಿ ಕೆ.ಸಿ. ಶೆಟ್ಟಿ ವಾದಿಸಿದ್ದರು. 
ಈ ಪ್ರಕರಣದಲ್ಲಿ 20ಕ್ಕೂ ಹೆಚ್ಚು ಮಂದಿ ವಿರುದ್ಧ ಪ್ರಕರಣ ದಾಖಲಾಗಿತ್ತು ಎನ್ನಲಾಗಿದೆ.
——

- Advertisement -

Latest News

error: Content is protected !!