Wednesday, June 24, 2026
Homeತಾಜಾ ಸುದ್ದಿಬಿಜೆಪಿ ಅಭ್ಯರ್ಥಿಯಾಗಿ ಡಾ.ಸಿ.ಎನ್. ಮಂಜುನಾಥ್ ಸ್ಪರ್ಧಿಸುವುದು ಕನ್ಫರ್ಮ್; ನಾಳೆ ಅಧಿಕೃತವಾಗಿ ಬಿಜೆಪಿಗೆ ಸೇರಲಿದ್ದಾರೆ ಹೃದ್ರೋಗ ತಜ್ಞ

ಬಿಜೆಪಿ ಅಭ್ಯರ್ಥಿಯಾಗಿ ಡಾ.ಸಿ.ಎನ್. ಮಂಜುನಾಥ್ ಸ್ಪರ್ಧಿಸುವುದು ಕನ್ಫರ್ಮ್; ನಾಳೆ ಅಧಿಕೃತವಾಗಿ ಬಿಜೆಪಿಗೆ ಸೇರಲಿದ್ದಾರೆ ಹೃದ್ರೋಗ ತಜ್ಞ

- Advertisement -
- Advertisement -

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಡಾ.ಸಿ.ಎನ್. ಮಂಜುನಾಥ್ ಸ್ಪರ್ಧಿಸುವುದು ಖಚಿತವಾಗಿದೆ. ಈ ಹಿನ್ನೆಲೆಯಲ್ಲಿ ಅವರು ಬಿಜೆಪಿ ಸೇರ್ಪಡೆಗೆ ಮುಹೂರ್ತ ಸಹ ಫಿಕ್ಸ್ ಆಗಿದೆ.

ಯೆಸ್.. ಜಯದೇವ ಹೃದ್ರೋಗ ಆಸ್ಪತ್ರೆಯ ಮಾಜಿ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಅವರು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದು ಖಚಿತವಾಗಿದೆ.

ನಾಳೆ ಗುರುವಾರ ಬೆಳಗ್ಗೆ ಬೆಂಗಳೂರಿನಲ್ಲಿ ಮಲ್ಲೇಶ್ವರಂ ಕಚೇರಿಯಲ್ಲಿ ನಡೆಯಲಿರುವ ಪಕ್ಷ ಸೇರ್ಪಡೆ ಕಾರ್ಯಕ್ರಮದದಲ್ಲಿ‌ ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನ್‌ದಾಸ್ ಅಗರ್ವಾಲ್, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭಾ ಪ್ರತಿಪಕ್ಷ ನಾಯಕ ಅಶೋಕ್ ಸೇರಿದಂತೆ ಪ್ರಮುಖ ನಾಯಕರ ಸಮ್ಮುಖದಲ್ಲಿ ಮಂಜುನಾಥ್ ಅವರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ.

- Advertisement -

Latest News

error: Content is protected !!