Thursday, June 4, 2026
Homeತಾಜಾ ಸುದ್ದಿಕಮಲಕ್ಕೆ ಕೈ”ಕೊಟ್ಟು ಕಾಂಗ್ರೆಸ್ ಸೇರಿದ ಮಾಜಿ ಎಂಎಲ್ಸಿ ಸಿ ಪಿ ಯೋಗೇಶ್ವರ್

ಕಮಲಕ್ಕೆ ಕೈ”ಕೊಟ್ಟು ಕಾಂಗ್ರೆಸ್ ಸೇರಿದ ಮಾಜಿ ಎಂಎಲ್ಸಿ ಸಿ ಪಿ ಯೋಗೇಶ್ವರ್

- Advertisement -
- Advertisement -

ಬೆಂಗಳೂರು; ಕೊನೆಗೂ ಡಿ ಕೆ ಬ್ರದರ್ಸ್ ಮಾಸ್ಟರ್ ಪ್ಲ್ಯಾನ್ ಚೆನ್ನಾಗಿಯೇ ವರ್ಕೌಟ್ ಆಗಿದೆ. ಬಿಜೆಪಿ ಪ್ರಾಥಮಿಕ ಸದಸ್ಯಕ್ಕೆ ರಾಜೀನಾಮೆ ನೀಡಿಗದ ಬೆನ್ನಲ್ಲೇ ಸಿ ಪಿ ಯೋಗೇಶ್ವರ್ ಕಮಲ ತೊರೆದು ಕಾಂಗ್ರೆಸ್ ಕೈ ಹಿಡಿದಿದ್ದಾರೆ.ಇಂದು ಕೆಪಿಸಿಸಿ ಕಚೇರಿಯಲ್ಲಿ ಸಿಪಿ ಯೋಗೇಶ್ವರ್ ಅವರು ಡಿಸಿಎಂ ಡಿಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಡಿಸಿಎಂ ಡಿಕೆ ಶಿವಕುಮಾರ್ ಅವರು ಮಾತನಾಡಿ ಸಿಪಿ ಯೋಗೇಶ್ವರ್ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ.ಪಕ್ಷದ ಸಿದ್ಧಾಂತಗಳನ್ನು ಒಪ್ಪಿ ಸಿಪಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಸಿಪಿ ಯೋಗೇಶ್ವರ್ ಮರಳಿ ಗೂಡಿಗೆ ಬಂದಿದ್ದಾರೆ. ಹಿಂದೆ ಕೆಲವರು ಬಿಜೆಪಿಗೆ ಹೋಗಿದ್ದರು ಈಗ ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಬರುತ್ತಿದ್ದಾರೆ ಎಂದು ಅವರು ತಿಳಿಸಿದರು.ನಾನು ವಯನಾಡು ಕ್ಷೇತ್ರಕ್ಕೆ ಹೋಗಬೇಕಾಗಿತ್ತು. ಪ್ರಿಯಾಂಕ ಗಾಂಧಿ ಅವರು ನಾಮಪತ್ರ ಸಲ್ಲಿಕೆಯಲ್ಲಿ ಭಾಗವಹಿಸಬೇಕಾಗಿತ್ತು.ಆದರೆ ಅನಿವಾರ್ಯ ಕಾರಣಗಳಿಂದ ಹೋಗಲಿಲ್ಲ. ಸಿಎಂ ಸಿದ್ದರಾಮಯ್ಯ ಅವರು ಈಗಾಗಲೇ ತೆರಳಿದ್ದಾರೆ ಎಂದಿದ್ದಾರೆ.

- Advertisement -

Latest News

error: Content is protected !!