Thursday, June 4, 2026
Homeಚಿಕ್ಕಮಗಳೂರುಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿಟಿ ರವಿ ಆಸ್ಪತ್ರೆಗೆ ದಾಖಲು

ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿಟಿ ರವಿ ಆಸ್ಪತ್ರೆಗೆ ದಾಖಲು

- Advertisement -
- Advertisement -

ಚಿಕ್ಕಮಗಳೂರು; ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿಟಿ ರವಿ ಆಸ್ಪತ್ರೆಗೆ ದಾಖಲಾಗಿದ್ದಾರೆ.  ಅವರು ಹೊಟ್ಟೆ ನೋವಿನ ಹಿನ್ನೆಲೆ ನಗರದ ಆಶ್ರಯ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ.ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಹಿನ್ನೆಲೆ  ಸಿ.ಟಿ. ರವಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿದ್ದಾಗ ಇದ್ದಕ್ಕಿದ್ದಂತೆ ಹೊಟ್ಟೆನೋವು ಕಾಣಿಸಿಕೊಂಡ ಕಾರಣ ಸಿ.ಟಿ.ರವಿ ಅಲ್ಲಿಂದ ನೇರವಾಗಿ ಆಸ್ಪತ್ರೆಗೆ ತೆರಳಿದ್ದಾರೆ.

ಆಸ್ಪತ್ರೆಯಲ್ಲಿ ಪರೀಕ್ಷೆ ನಡೆಸಿದ ವೈದ್ಯರು ಕಿಡ್ನಿ ಸ್ಟೋನ್‌ನಿಂದ ಹೊಟ್ಟೆ ನೋವು ಆಗಿದೆ ಎಂದು ಹೇಳಿದ್ದಾರೆ. ಅವರನ್ನು ಇಂದು  ಬೆಳಿಗ್ಗೆ 11 ಗಂಟೆ ಬಳಿಕ ಡಿಸ್ಚಾರ್ಜ್ ಮಾಡಲಾಗುತ್ತದೆ. ಹಾಗೆಯೇ ಅವರು ಇಂದು ಒಂದು ದಿನ ವಿಶ್ರಾಂತಿಯಲ್ಲಿ ಇರಬೇಕಾಗುತ್ತದೆ ಎಂದು ಸೂಚನೆ ನೀಡಿದ್ದಾರೆ ಎನ್ನಲಾಗಿದೆ

- Advertisement -

Latest News

error: Content is protected !!