Saturday, April 27, 2024
Homeಚಿಕ್ಕಮಗಳೂರುಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ದ್ವೇಷದ ಹೇಳಿಕೆ ಹಂಚಿಕೊಂಡ ಸಿಟಿ.ರವಿ; ಎಫ್‌ಐಆರ್ ದಾಖಲು

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ದ್ವೇಷದ ಹೇಳಿಕೆ ಹಂಚಿಕೊಂಡ ಸಿಟಿ.ರವಿ; ಎಫ್‌ಐಆರ್ ದಾಖಲು

spot_img
- Advertisement -
- Advertisement -

ಚಿಕ್ಕಮಗಳೂರು: ಬಿಜೆಪಿ ಮುಖಂಡ ಸಿಟಿ.ರವಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ದ್ವೇಷದ ಹೇಳಿಕೆ ಪ್ರಕಟಿಸಿದ ಆರೋಪದಲ್ಲಿ ಅವರ ವಿರುದ್ಧ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಚುನಾವಣಾ ಆಯೋಗದ ಸಾಮಾಜಿಕ ಜಾಲತಾಣ ಮೇಲ್ವಿಚಾರಣಾ ಸಮಿತಿಯ ನೋಡಲ್ ಅಧಿಕಾರಿಯ ಸೂಚನೆ ಮೇರೆಗೆ ಉಡುಪಿ–ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಕೆ.ಜಯಲಕ್ಷ್ಮಮ್ಮ ನಗರ ಠಾಣೆಗೆ ದೂರು ನೀಡಿ ಎಫ್‌ಐಆರ್ ದಾಖಲಿಸಿದ್ದಾರೆ.

ಪ್ರಕರಣದ ವಿವರ: ಸಿ.ಟಿ.ರವಿ ತಮ್ಮ ಎಕ್ಸ್‌ ಖಾತೆಯಲ್ಲಿ ‘ಸಾಗರಗಳ ಆಳವನ್ನು ಅಳೆಯಬಹುದು. ಹಿಂದೂ ಮತ್ತು ಹಿಂದೂ ಧರ್ಮದ ವಿರುದ್ಧ ರಾಹುಲ್ ಗಾಂಧಿ ದ್ವೇಷವನ್ನು ಎಂದಿಗೂ ಕಂಡು ಹಿಡಿಯಲಾಗುವುದಿಲ್ಲ. ಹಿಂದೂ ಧರ್ಮದಲ್ಲಿ ಶಕ್ತಿ ಎಂಬ ಪದವಿದೆ, ನಮ್ಮ ಹೋರಾಟ ಶಕ್ತಿ ವಿರುದ್ಧ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ದುಷ್ಟ ಶಕ್ತಿಗಳ ದಾಳಿಯಿಂದ ನಮ್ಮ ಧರ್ಮವನ್ನು ರಕ್ಷಿಸಲು ಹಿಂದೂಗಳು ಚುನಾವಣೆಯಲ್ಲಿ ಕಾಂಗ್ರೆಸ್ ಅನ್ನು ನಿರ್ದಯವಾಗಿ ತೆಗೆದು ಹಾಕಬೇಕು’ ಎಂದು ಪೋಸ್ಟ್ ಹಾಕಿದ್ದರು.

‘ಇದು ಚುನಾವಣಾ ನೀತಿ ಸಂಹಿತೆಯಡಿ ಉಲ್ಲಂಘನೆಯಾಗಿರುವುದು ಮೇಲ್ನೋಟಕ್ಕೆ ಕಂದು ಬಂದಿದೆ. ಕಾನೂನು ಕ್ರಮ ಕೈಗೊಂಡು ವರದಿ ಸಲ್ಲಿಸಬೇಕು’ ಎಂದು ಚುನಾವಣಾ ಆಯೋಗವು ಜಿಲ್ಲಾ ಚುನಾವಣಾಧಿಕಾರಿಗೆ ಸೂಚನೆ ನೀಡಿತ್ತು.

- Advertisement -
spot_img

Latest News

error: Content is protected !!