Wednesday, June 3, 2026
Homeತಾಜಾ ಸುದ್ದಿಸ್ಥಳೀಯ ಸಂಸ್ಥೆಗಳ ರಾಜಕೀಯ ಮೀಸಲಾತಿ ವಿಚಾರ: ನ್ಯಾ. ಭಕ್ತವತ್ಸಲ ಸಮಿತಿ ವರದಿ ಅಂಗೀಕರಿಸಿದ ಸಚಿವ ಸಂಪುಟ...

ಸ್ಥಳೀಯ ಸಂಸ್ಥೆಗಳ ರಾಜಕೀಯ ಮೀಸಲಾತಿ ವಿಚಾರ: ನ್ಯಾ. ಭಕ್ತವತ್ಸಲ ಸಮಿತಿ ವರದಿ ಅಂಗೀಕರಿಸಿದ ಸಚಿವ ಸಂಪುಟ ಸಭೆ

- Advertisement -
- Advertisement -

ಬೆಂಗಳೂರು: ಸ್ಥಳೀಯ‌ ಸಂಸ್ಥೆಗಳ ಚುನಾವಣೆಗೆ ಮೀಸಲಾತಿ ಸಂಬಂಧ ನ್ಯಾ. ಭಕ್ತವತ್ಸಲಂ ಸಮಿತಿ ವರದಿಯನ್ನು ರಾಜ್ಯ ಸಚಿವ ಸಂಪುಟ ಸಭೆ ಅಂಗೀಕರಿಸಿದೆ.

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹಿಂದುಳಿದ ವರ್ಗಗಳಿಗೆ ರಾಜಕೀಯ ಮೀಸಲು ನೀಡುವ ವಿಚಾರಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ನ್ಯಾ. ಭಕ್ತವತ್ಸಲ ಸಮಿತಿ ರಚಿಸಿತ್ತು.

ಸುಪ್ರೀಂ ಕೋರ್ಟ್ ಗೆ ನೀಡಿದ್ದ ಮಧ್ಯಂತರ ವರದಿಯನ್ನು ರಾಜ್ಯ ಸರಕಾರವೂ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ವರದಿ ಅಂಗೀಕರಿಸಲಾಗಿದೆ.

2027-28ರಲ್ಲಿ ಹೊಸ ರಾಜಕೀಯ ಮೀಸಲು ನೀತಿ ಅನ್ವಯ ಚುನಾವಣೆ ನಡೆಸಲು ತೀರ್ಮಾನ ಮಾಡಲಾಗಿದೆ.

ಈ ವರ್ಷ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಹಳೆಯ ಮೀಸಲು ಪಟ್ಟಿ ಅನ್ವಯವೇ ನಡೆಸಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

- Advertisement -

Latest News

error: Content is protected !!