Thursday, June 4, 2026
Homeಕರಾವಳಿಉಡುಪಿಕಾರ್ಕಳ, ಹೆಬ್ರಿ ಮತ್ತು ಕಾಪು ತಾಲೂಕುಗಳಲ್ಲಿ 1600 ಕೋಟಿ ರೂ. ವೆಚ್ಚದಲ್ಲಿ ಬಹು ಗ್ರಾಮ ಕುಡಿಯುವ...

ಕಾರ್ಕಳ, ಹೆಬ್ರಿ ಮತ್ತು ಕಾಪು ತಾಲೂಕುಗಳಲ್ಲಿ 1600 ಕೋಟಿ ರೂ. ವೆಚ್ಚದಲ್ಲಿ ಬಹು ಗ್ರಾಮ ಕುಡಿಯುವ ನೀರು ಯೋಜನೆಗೆ ಸಚಿವ ಸಂಪುಟ ಅಸ್ತು

- Advertisement -
- Advertisement -

ಬೆಂಗಳೂರು: ಕೇಂದ್ರ ಸರ್ಕಾರದ ಜಲಜೀವನ್ ಮಿಷನ್ ಯೋಜನೆಯಡಿ ಉಡುಪಿ ಜಿಲ್ಲೆಯ ಕಾರ್ಕಳ, ಹೆಬ್ರಿ ಮತ್ತು ಕಾಪು ತಾಲೂಕುಗಳಲ್ಲಿ ಬಹು ಗ್ರಾಮ ಕುಡಿಯುವ ನೀರಿನ ಯೋಜನೆ ಅನುಷ್ಠಾನಗೊಳ್ಳಲಿದೆ.

ಬೆಂಗಳೂರಿನಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಯೋಜನೆ ಅನುಷ್ಠಾನಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಮೂರು ತಾಲೂಕುಗಳಲ್ಲಿ 69 ಗ್ರಾಮಗಳಿಗೆ ಕುಡಿಯುವ ನೀರು ಪೂರೈಕೆಗೆ ಅನುಮೋದನೆ ನೀಡಲಾಗಿದ್ದು, 1904 ಕುಟುಂಬಗಳಿಗೆ ಸಹಾಯವಾಗಲಿದೆ.

ಪರಿಷ್ಕೃತ 1600 ಕೋಟಿ ರೂಪಾಯಿ ವೆಚ್ಚದಲ್ಲಿ ಮೂರು ತಾಲೂಕುಗಳಲ್ಲಿ ಬಹು ಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆ ಅನುಷ್ಠಾನಗೊಳ್ಳಲಿದೆ.

- Advertisement -

Latest News

error: Content is protected !!