Thursday, June 4, 2026
Homeತಾಜಾ ಸುದ್ದಿಎಸ್ ಸಿ, ಎಸ್ ಟಿ ಮೀಸಲಾತಿ ಹೆಚ್ಚಳಕ್ಕೆ ಸಚಿವ ಸಂಪುಟ ಸಭೆ ಅನುಮೋದನೆ

ಎಸ್ ಸಿ, ಎಸ್ ಟಿ ಮೀಸಲಾತಿ ಹೆಚ್ಚಳಕ್ಕೆ ಸಚಿವ ಸಂಪುಟ ಸಭೆ ಅನುಮೋದನೆ

- Advertisement -
- Advertisement -

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಕ್ಕೆ ಮೀಸಲಾತಿ ಹೆಚ್ಚಳ ಮಾಡಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.

ವಿಧಾನಸೌಧದಲ್ಲಿ ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿನ್ನೆ ಸರ್ವಪಕ್ಷ ಸಭೆಯಲ್ಲಿ ತೆಗೆದುಕೊಂಡಿದ್ದ ತೀರ್ಮಾನಕ್ಕೆ ಒಪ್ಪಿಗೆ ನೀಡಲಾಗಿದೆ.

ಪರಿಶಿಷ್ಟ ಜಾತಿಗೆ ಶೇಕಡಾ 15 ರಿಂದ ಶೇಕಡಾ 17ಕ್ಕೆ ಮತ್ತು ಪರಿಶಿಷ್ಟ ವರ್ಗಕ್ಕೆ ಶೇಕಡಾ 3 ರಿಂದ ಶೇಕಡಾ 7 ಕ್ಕೆ ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ.

ಡಿಸೆಂಬರ್‌ ನಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಮಂಡಲದಲ್ಲಿ ಒಪ್ಪಿಗೆ ಪಡೆದ ಬಳಿಕ ರಾಜ್ಯ ಸರ್ಕಾರದ ಮೀಸಲಾತಿ ಹೆಚ್ಚಳವನ್ನು ಸಂವಿಧಾನದ ಶೆಡ್ಯೂಲ್ 9 ರಲ್ಲಿ ಸೇರಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಿದೆ.

- Advertisement -

Latest News

error: Content is protected !!